

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ತೇಕಾಣೆ ಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಬುಧವಾರ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಗ್ರಾಮದ ತಮ್ಮಯ್ಯ ಅವರ ಪುತ್ರ ಪ್ರಭುಸ್ವಾಮಿ (24) ಶವವಾಗಿ ಪತ್ತೆಯಾಗಿದ್ದಾನೆ. ಈತ 2 ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಮೀಪದ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬಳಿಕ ಕುಟುಂಬಸ್ಥರು ತಿಳಿಸಿದ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ತಂದೆ ತಮ್ಮಯ್ಯ ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮ.ಬೆಟ್ಟ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ನೀಡಿದರು.