ಕೆರೆ ಜಾಗದಲ್ಲಿ ನಿರ್ಮಿಸಿದ್ದ ಮನೆಗಳ ತೆರವು

06 HANUR 4
Published on

ಹನೂರು: ಪಟ್ಟಣದ ಹೊರವಲಯದಲ್ಲಿ ಸರ್ಕಾರಿ ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿಕೊಂಡಿದ್ದ ಮನೆಗಳನ್ನು ಮಂಗಳವಾರ ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ಸಮ್ಮುಖದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರೆವುಗೊಳಿಸಲಾಯಿತು.

ಗ್ರಾಮದ ಸರ್ವೇ ನಂಬರ್ 405ರಲ್ಲಿನ 4.82 ಎಕರೆ ಜಮೀನಿನ ಪೈಕಿ 0.40 ಸೆಂಟ್ಸ್ ಸರ್ಕಾರಿ ಕೆರೆ ಜಾಗದಲ್ಲಿ ನಾಲ್ವರು ಮನೆ ನಿಮಿಸಿಕೊಂಡಿದ್ದರು. ಈ ಸಂಬಂಧ 2016ರಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಪ್ರಕ್ರಿಯೆಯಲ್ಲಿತ್ತು. 2024ರ ಫೆ.15 ರಂದು ಪ್ರಕರಣ ಇತ್ಯರ್ಥಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕಾನೂನು ರೀತ್ಯಾ ಕ್ರಮವಹಿಸಿ ಕೆರೆ ಜಾಗವನ್ನು ಅತಿಕ್ರಮಿಸಿಕೊಂಡು ನಿರ್ಮಿಸಿದ್ದ ಮನೆಗಳನ್ನು ತೆರೆವುಗೊಳಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಹನೂರು ತಹಸೀಲ್ದಾರ್‌ಗೆ ಸೂಚಿಸಿತ್ತು. ಮಂಗಳವಾರ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಅವರು ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮನೆಗಳನ್ನು ತೆರೆವುಗೊಳಿಸಿದರು.

ಈ ವೇಳೆ ಸ್ಥಳೀಯ ನಿವಾಸಿಗಳಿಂದ ಆಕ್ಷೇಪ ವ್ಯಕ್ತವಾದರೂ ನ್ಯಾಯಾಲಯದ ಸೂಚನೆಯಂತೆ ಕಾರ್ಯ ಕೈಗೊಳ್ಳಲಾಯಿತು. ಸಬ್ ಇನ್‌ಸ್ಪೆಕ್ಟರ್ ಮಂಜುನಾಥ್ ಪ್ರಸಾದ್, ಎಎಸ್‌ಐ ಕೃಷ್ಣ, ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net