ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲಿ

12 HANUR 2
Published on

ಹನೂರು: ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ನಿಯಮವನ್ನು ಪಾಲಿಸುವುದರ ಮೂಲಕ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಲ್ಲವಾದಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಇನ್‌ಸ್ಪೆಕ್ಟರ್ ಶಶಿಕುಮಾರ್ ಎಚ್ಚರಿಸಿದರು.

ಪಟ್ಟಣದ ಆರ್.ಎಸ್.ದೊಡ್ಡಿ ಬಳಿ ಸೋಮವಾರ ರಸ್ತೆ ಸುರಕ್ಷತಾ ಅಂಗವಾಗಿ ಸಾರ್ವಜನಿಕರಿಗೆ ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ
ಅಭಿಯಾನದಲ್ಲಿ ಮಾತನಾಡಿದರು. ಹೆಲ್ಮೆಟ್ ಜೀವ ರಕ್ಷಕ ಸಾಧನ. ಕೆಲ ಬೈಕ್ ಸವಾರರು ಅದರಲ್ಲೂ ಸ್ಥಳೀಯರು ಹೆಲ್ಮೆಟ್ ಧರಿಸಲು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಅಪಘಾತದ ವೇಳೆ ಸಾವುಗಳಾಗುವ ಸಾಧ್ಯತೆ ಹೆಚ್ಚಿದೆ. ಈ ಕಾರಣದಿಂದಲೇ ಕಳೆದ 2-3 ತಿಂಗಳಿನಿಂದ ಹನೂರು ಭಾಗದಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರರು ಮೃತಪಟ್ಟಿದ್ದಾರೆ. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದರು.

ವಾಹನಗಳಿಗೆ ವಿಮೆ ನವೀಕರಣ ಮಾಡದಿರುವುದು, ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು, ಅಪ್ರಾಪ್ತರಿಗೆ ಚಾಲನೆ ಮಾಡಲು ವಾಹನ ನೀಡುವುದು ನಿಯಮ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸುವುದರ ಮೂಲಕ ಪೊಲೀಸರಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಎಎಸೈ ಶಿವಕುಮಾರ್, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net