ಹನೂರಿಗೆ ರಥಯಾತ್ರೆ ಆಗಮನ ನಾಳೆ

Published on

ಹನೂರು: ಕರ್ನಾಟಕ ರಥ ಸಂಭ್ರಮ 50ರ ಜ್ಯೋತಿ ರಥಯಾತ್ರೆಯು ಆ.25 ರಂದು ಹನೂರಿಗೆ ಆಗಮಿಸಲಿದೆ. ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಹಸೀಲ್ದಾರ್ ವೈ.ಕೆ. ಗುರುಪ್ರಸಾದ್ ತಿಳಿಸಿದ್ದಾರೆ.

ಬೆಳಗ್ಗೆ 9 ಗಂಟೆಗೆ ಜ್ಯೋತಿ ರಥಯಾತ್ರೆಯು ಪಟ್ಟಣಕ್ಕೆ ಆಗಮಿಸಲಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಿಂದ ಮುಖ್ಯ ರಸ್ತೆಯಲ್ಲಿ ಸಂಚರಿಸಲಿದೆ. ಆದ್ದರಿಂದ ವಿವಿಧ ಕನ್ನಡಪರ, ದಲಿತಪರ, ರೈತ ಸಂಘಟನೆಗಳು, ಸಂಘ ಸಂಸ್ಥೆಗಳು ಹಾಗೂ ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net