ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದವರ ಬಂಧನ

crime-text-logo-brand
Published on

ಹನೂರು: ತಾಲೂಕಿನ ಚಿಕ್ಕಲತ್ತೂರು ಗ್ರಾಮದ ಬಸ್ ನಿಲ್ದಾಣದ ಬಳಿ ಬುಧವಾರ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರಾಮಾಪುರ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಕೌದಳ್ಳಿ ಗ್ರಾಮದವರಾದ ಶಿವಣ್ಣ (43), ಶಿವಾನಂದ (39) ಬಂಧಿತರು. ಇಬ್ಬರು ಬೆಳಗ್ಗೆ 8.30ರಲ್ಲಿ ಚಿಕ್ಕಲತ್ತೂರು ಬಸ್ ನಿಲ್ದಾಣದ ಬಳಿ ಆನ್‌ಲೈನ್ ಮೂಲಕ ಸಾರ್ವಜನಿಕರಿಗೆ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಬ್ ಇನ್‌ಸ್ಪೆಕ್ಟರ್ ಈಶ್ವರ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net