ಮಣ್ಣುಮುಕ್ಕುವ ಹಾವು ಸಾಗಿಸುತ್ತಿದ್ದ ಇಬ್ಬರ ಬಂಧನ

Crime Logo
Published on

ಹನೂರು: ಪಟ್ಟಣ ಸಮೀಪದ ಅರಕನಹಳ್ಳ ಬಳಿ ಬುಧವಾರ ಕಾರಿನಲ್ಲಿ ಅಕ್ರಮವಾಗಿ ಮಣ್ಣು ಮುಕ್ಕುವ ಹಾವನ್ನು ಸಾಗಿಸುತ್ತಿದ್ದ ಇಬ್ಬರನ್ನು ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಶ್ರೀನಗರದ ನಿವಾಸಿ ಹಾಗೂ ಹಾಲಿ ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ಕಾಂತಿಕುಮಾರ್ (31) ಹಾಗೂ ಶಿರಾ ತಾಲೂಕಿನ ಚನ್ನನಕುಂಟೆ ಗ್ರಾಮದ ಚೇತನ್ (24) ಬಂಧಿತರು. ಇವರು ಕಾರಿನಲ್ಲಿ ಅಕ್ರಮವಾಗಿ ಜೀವಂತವಿರುವ ಮಣ್ಣು ಮುಕ್ಕುವ ಹಾವನ್ನು ಸಾಗಿಸುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಳದ ಸಬ್‌ಇನ್‌ಸ್ಪೆಕ್ಟರ್ ವಿಜಯರಾಜು ಹಾಗೂ ಸಿಬ್ಬಂದಿ ಹನೂರು ಸಮೀಪದ ಅಜ್ಜೀಪುರ ಗ್ರಾಮಕ್ಕೆ ತೆರಳುವ ಅರಕನಹಳ್ಳದ ಬಳಿ ದಾಳಿ ನಡೆಸಿ ಪರಿಶೀಲಿಸಿದಾಗ ಮಾಹಿತಿ ದೃಢಪಟ್ಟಿದೆ. ಬಳಿಕ ಕಾರನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net