

ಹನೂರು: ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಗರ್ಭಿಣಿಯಾಗಲು ಕಾರಣನಾಗಿದ್ದ ಯುವಕನನ್ನು ಶನಿವಾರ ಹನೂರು ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಕುಡುವಾಳೆ ಗ್ರಾಮದ ರಾಜೇಶ್ ಬಂಧಿತ. ಈತ ಸಮೀಪದ ಗ್ರಾಮವೊಂದರ ಅಪ್ರಾಪ್ತೆಯನ್ನು ವಿವಾಹವಾಗಿದ್ದು ಆಕೆ ಗರ್ಭಿಣಿಯಾಗಿದ್ದಳು. ಅನಾರೋಗ್ಯ ನಿಮಿತ್ತ ಪಿ.ಜಿ.ಪಾಳ್ಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದ್ದ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ ವೈದ್ಯಾಧಿಕಾರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಮನಕ್ಕೆ ತಂದಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ನೀಡಿದ ದೂರಿನ ಮೇರೆಗೆ ಹನೂರು ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.