ರಾಷ್ಟ್ರೀಯ ಹೆದ್ದಾರಿ ಮಾಡಲು ಮನವಿ

11 HANUR 4
Published on

ಹನೂರು: ಹನೂರಿನಿಂದ ರಾಮಾಪುರ ಗರಿಕೆಕಂಡಿ ಮಾರ್ಗವಾಗಿ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ತಾಲೂಕಿನ ನಾಲ್‌ರೋಡ್ ಗ್ರಾಮದಲ್ಲಿ ಸೋಮವಾರ 25 ಕೋಟಿ ರೂ. ವೆಚ್ಚದಲ್ಲಿನ ರಾಮಾಪುರ ಗರಿಕೆಕಂಡಿ ರಸ್ತೆ ಅಭಿವೃದ್ಧಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈ ರಸ್ತೆಯು ಸುಮಾರು 15 ವರ್ಷಗಳಿಂದ ಹದಗೆಟ್ಟಿತ್ತು. ಇದರಿಂದ ವಾಹನ ಸವಾರರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದರು. ಜತೆಗೆ ಇತ್ತೀಚಿಗೆ ತೀವ್ರ ಹಾಳಾದ ರಸ್ತೆಯಿಂದ ಅಪಘಾತಗಳು ಸಂಭವಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ನಿರ್ಮಿಸುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿ ಬಂದಿತ್ತು.

ಇದನ್ನು ಮನಗಂಡು ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಲೋಕೋಪಯೋಗಿ ಇಲಖೆಯ ಸಚಿವರಿಗೆ ಮನವಿ ಮಾಡಲಾಗಿತ್ತು. ದೊರೆತ 25 ಕೋಟಿ ರೂ. ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುತ್ತಿರುವುದು ಸಂತಸ ತಂದಿದೆ. ಇದೇ ರೀತಿಯಲ್ಲಿ ಕ್ಷೇತ್ರದಲ್ಲಿ ಹಾಳಾಗಿರುವ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡುವುದರ ಜತೆಗೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಇದಕ್ಕೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ಮೈಮುಲ್ ನಿರ್ದೇಶಕ ಮಹದೇವ ಪ್ರಸಾದ್, ಪಿಡಬ್ಲುೃಡಿ ಎಇಇ ಚಿನ್ನಣ್ಣ, ಮುಖಂಡರಾದ ಮಹದೇವ, ರಾಜು, ಮಂಜೇಶ್, ಶಿವಪ್ಪ, ಹುಚ್ಚಯ್ಯ, ನಾಗೇಂದ್ರಬಾಬು, ಗೋವಿಂದೇಗೌಡ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net