ಲಂಚಕ್ಕೆ ಬೇಡಿಕೆ ಇಟ್ಟ ಬಿಇಒ, ಸಿಆರ್‌ಪಿ ಬಂಧನ

5b1943e3-7c00-433c-b4bf-33bc3bf760a5
Published on

ಹನೂರು: ನಿವೃತ್ತ ಶಿಕ್ಷಕನ ಗಳಿಕೆ ರಜೆ ಹಣವನ್ನು ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಹಾಗೂ ಸಿಆರ್‌ಪಿ ಮುನಿರಾಜು ಅವರನ್ನು ಬುಧವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ನಿವೃತ್ತ ಶಿಕ್ಷಕ ವಿಜಯ್ ಕುಮಾರ್ 139 ದಿನಗಳ ಗಳಿಕೆ ರಜೆ(ಎನ್‌ಕ್ಯಾಶಮೆಂಟ್) ಹಣ ಮಂಜೂರು ಮಾಡಲು 15 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ನಿವೃತ್ತ ಶಿಕ್ಷಕ ವಿಜಯ್ಕುಮಾರ್ ಲೋಕಾಯುಕ್ತ ಪೊಲೀಸರಿಗೆ ದೂರು ಕೊಟ್ಟಿದ್ದರು.
ಬುಧವಾರ ಹನೂರು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಿವೃತ್ತ ಶಿಕ್ಷಕ ವಿಜಯ್ಕುಮಾರ್ ಲಂಚದ ಹಣ ನೀಡುತ್ತಿದ್ದಾಗ ಲೋಕಾಯುಕ್ತ ಇನ್‌ಸ್ಪೆಕ್ಟರ್ ಲೋಹಿತ್ ಕುಮಾರ್ ಹಾಗೂ ತಂಡ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಹಾಗೂ ಸಿಆರ್‌ಪಿ ಮುನಿರಾಜು ಅವರನ್ನು ವಶಕ್ಕೆ ಪಡೆದು ಹಣವನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ತಿ.ನರಸೀಪುರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ವೇಳೆಯೂ ಶಿವರಾಜು ಲೋಕಾಯುಕ್ತ ದಾಳಿಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net