ರಕ್ತದಾನ ಮಾಡಿದ ವಿದ್ಯಾರ್ಥಿಗಳು

13 HANUR 4
Published on

ಹನೂರು: ಪಟ್ಟಣದ ಜಿ.ವಿ.ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ರೆಡ್‌ಕ್ರಾಸ್, ಎನ್‌ಎಸ್‌ಎಸ್, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಘಟಕ ಹಾಗೂ ಹೋಲಿಕ್ರಾಸ್ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 21 ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.

ಕಾಲೇಜಿನ ಪ್ರಾಂಶುಪಾಲ ಟಿ.ಎನ್. ಶಾಂತರಾಜು ಮಾತನಾಡಿ, ರಕ್ತದಾನದಿಂದ ಅನಾರೋಗ್ಯ ಸಮಸ್ಯೆ ಉಂಟಾಗುತ್ತದೆ ಎಂದು ಕೆಲವರು ಮೂಢನಂಬಿಕೆ ಹೊಂದಿದ್ದಾರೆ. ಆದರೆ ಇದು ತಪ್ಪು ಗ್ರಹಿಕೆ. ರಕ್ತದಾನದಿಂದ ದೇಹದಲ್ಲಿ ಹೊಸ ರಕ್ತ ಕಣದ ರಚನೆಗೆ ಸಹಕಾರಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ರಕ್ತದಾನಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ಆಸ್ಪತ್ರೆ ವೈದ್ಯರಾದ ಡಾ.ವಿಕಾಸ್ ನಾಯಕ್, ಡಾ.ವರ್ಷಿತಾ, ಆಡಳಿತಾಧಿಕಾರಿ ಡೆಲಿನಾ, ಸಿಬ್ಬಂದಿ ಪುಷ್ಪಾ, ಮಮತಾ, ಪ್ರಾಧ್ಯಾಪಕರಾದ ಕೃಪಾ, ಸಿ.ಎಸ್. ಸುರೇಂದ್ರ, ಎನ್.ರವಿಶಂಕರ್, ಗುಂಡೂರಾವ್ ಹಾಗೂ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net