ಬಸ್ ಮಗುಚಿ ಮೂವರಿಗೆ ಗಾಯ

fe62ea32-88ff-4c80-8dec-a423c0879a27
Published on

ಹನೂರು: ಕೊಳ್ಳೇಗಾಲದಿಂದ ಬೈಲೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಬುಧವಾರ ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಕೊಳ್ಳೇಗಾಲದಿಂದ ಬೈಲೂರಿನ ಕಡೆಗೆ ತೆರಳುತ್ತಿದ್ದ ಬಸ್ ಚಿಕ್ಕರಂಗಶೆಟ್ಟಿ ದೊಡ್ಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಚಾಲಕ ಬಸ್ಸನ್ನು ನಿರ್ವಾಹಕನಿಗೆ ನೀಡಿದ್ದು, ಆತ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ತನಿಖೆ ನಡೆಸಿ ಚಾಲಕ ಹಾಗೂ ನಿರ್ವಾಹಕನನ್ನು ಅಮಾನತು ಪಡಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net