ಮಲೆ ಮಾದಪ್ಪನ ದರ್ಶನ ಪಡೆದ ಬಸವಜಯ ಮೃತ್ಯುಂಜಯ ಸ್ವಾಮೀಜಿ

12 HANUR 2
Published on

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಬುಧವಾರ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇಗುಲಕ್ಕೆ ಆಗಮಿಸಿದ ಶ್ರೀಗಳು ಪ್ರದಕ್ಷಿಣೆ ಹಾಕಿ ದೇವರ ದರ್ಶನ ಪಡೆದರು. ಈ ವೇಳೆ ದೇಗುಲದ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ಬಳಿಕ ಸಾಲೂರು ಬೃಹನ್ಮಠಕ್ಕೆ ತೆರಳಿ ಪ್ರಸಾದ ಸ್ವೀಕರಿಸಿ ತೆರಳಿದರು. ದೇಗುಲದ ಪಾರುಪತ್ತೇದಾರ ಮಲ್ಲಿಕಾರ್ಜುನ, ಕೆ.ವಿ. ಪುಟ್ಟಪ್ಪ, ಅಮ್ಮನಪುರ ಮಲ್ಲೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net