ಮಾದಪ್ಪನ ದರ್ಶನ ಪಡೆದ ಎಸ್.ಬಾಲರಾಜು

22 HANUR 3
Published on

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಶುಕ್ರವಾರ ಬಿಜೆಪಿ ಲೋಕಸಭೆ ಅಭ್ಯರ್ಥಿ ಎಸ್.ಬಾಲರಾಜು ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದು ಪೂಜೆ ಸಲ್ಲಿಸುವುದರ ಮೂಲಕ ಮತ ಪ್ರಚಾರಕ್ಕೆ ಚಾಲನೆ ನೀಡಿದರು.

ಗುರುವಾರ ಮ.ಬೆಟ್ಟಕ್ಕೆ ಭೇಟಿ ನೀಡಿದ ಅವರು ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿದ್ದರು. ಬೆಳಗ್ಗೆ 7ಗಂಟೆಗೆ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು. ಬಳಿಕ ಶ್ರೀ ಸಾಲೂರು ಬೃಹನ್ಮಠಕ್ಕೆ ಭೇಟಿ ನೀಡಿದ ಅವರು ಹಿರಿಯ ಶ್ರೀ ಗುರು ಸ್ವಾಮೀಜಿ ಹಾಗೂ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದು ಮತ ಪ್ರಚಾರ ನಡೆಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಒಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ಜನಧ್ವನಿ ಬಿ. ವೆಂಕಟೇಶ್, ಸದಸ್ಯ ನಟರಾಜೇಗೌಡ, ಮುಖಂಡರಾದ ಮಂಗಲ ಶಿವಕುಮಾರ್, ಮಹದೇವಪ್ಪ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net