ಹನೂರಲ್ಲಿ ಮೌನ ಪ್ರತಿಭಟನಾ ಮೆರವಣಿಗೆ

03 HANUR 2
Published on

ಹನೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಅಸ್ಪಶ್ಯತೆ ಹೇಳಿಕೆ ಖಂಡಿಸಿ ಶನಿವಾರ ಪಟ್ಟಣದಲ್ಲಿ ಬಿಜೆಪಿ ಮುಖಂಡರು ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು.


ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಿಜೆಪಿ ಮುಖಂಡರು, ಅಸ್ಪಶ್ಯತೆ ಹೇಳಿಕೆ ನೀಡಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.


ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಉತ್ತಮ ಅಡಳಿತ ನೀಡುವುದರ ಮೂಲಕ ಎಲ್ಲ ಸಮಾಜಕ್ಕೂ ಸಮಾನ ಅವಕಾಶ ನೀಡಿದ್ದಾರೆ. ಎಲ್ಲೂ ಸಂವಿಧಾನ ವಿರೋಧಿ ಹೇಳಿಕೆ ಹಾಗೂ ಶಾಂತಿ ಕದಡುವ ಪ್ರಯತ್ನ ಮಾಡಿಲ್ಲ. ಆದರೆ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಡಿ 2 ಬಾರಿ ಮುಖ್ಯಮಂತ್ರಿಯಾಗಿರುವ ಎಚ್.ಡಿ. ಕುಮಾರಸ್ವಾಮಿ, ಸಮಾಜದ ಅಸ್ಪಶ್ಯತೆ ಬಗ್ಗೆ ಹೇಳಿಕೆ ನೀಡಿರುವುದು ಅವರಿಗೆ ಶೋಭೆ ತರುವುದಿಲ್ಲ. ಜಾತ್ಯತೀತ ಬರೀ ಪಕ್ಷಕ್ಕೆ ಸೀಮಿತವಾಗಿದೆ. ಕುಮಾರಸ್ವಾಮಿ ಅವರ ಮನಸು ಮತ್ತು ಮಾತಿನಲ್ಲಿ ಜಾತೀಯತೆ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದರು.


ಬಿಜೆಪಿ ಮುಖಂಡರಾದ ನಿಶಾಂತ್, ಬಸವರಾಜು, ರಂಗೇಗೌಡ, ಸುರೇಶ್, ಕಿರಣ್, ಸಿದ್ದಪ್ಪಾಜಿ ನಾಯಕ, ಚೆನ್ನೇಶ್‌ಗೌಡ, ಚೇತನ್, ರುದ್ರ, ಜಗದೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net