

ಮಡಿಕೇರಿ:
ಕಳೆದ 75 ವರ್ಷಗಳಲ್ಲಿ ದೇಶಕ್ಕೆ ಎದುರಾದ ಸಮಸ್ಯೆ ಮತ್ತು ಸವಾಲುಗಳನ್ನು ಒಮ್ಮನಸ್ಸಿನಿಂದ ಎದುರಿಸಿ ಗಣತಂತ್ರವನ್ನು ಸಂರಕ್ಷಿಸಿಸಿಕೊAಡು ಬರಲಾಗಿದ್ದು ವ್ಯಕ್ತಿಯ ಹಿತಕ್ಕಿಂತ ಸಮಾಜದ ಹಿತವೇ ಮುಖ್ಯ ಎನ್ನುವ ನಮ್ಮ ಪೂರ್ವಿಕರ ಜೀವನತತ್ವವನ್ನು ನಾವಿಂದು ಅರ್ಥಮಾಡಿಕೊಂಡು ಅನುಸರಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಿಜ್ಞಾನ, ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಖಾತೆ ಸಚಿವ ಎನ್. ಎಸ್. ಬೋಸರಾಜು ಅಭಿಪ್ರಾಯಪಟ್ಟರು. ಶುಕ್ರವಾರ ಇಲ್ಲಿನ ಜನರಲ್ ತಿಮ್ಮ್ಮಯ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಭಾರತದಂತಹ ಬಹುಭಾಷೆ, ಬಹುಧರ್ಮ ಹಾಗೂ ವಿಭಿನ್ನ ಸಂಸ್ಕೃತಿಯ ದೇಶಕ್ಕೆ ಸರ್ವರಿಗೂ ಸಮ್ಮತವಾಗುವ ಸಂವಿಧಾನ ರಚನೆ ಸುಲಭದ ಕೆಲಸವಾಗಿರಲಿಲ್ಲ. 17ನೇ ಶತಮಾನದ ನಂತರ ಬ್ರಿಟಿಷರ ವಶವಾಗಿದ್ದ ಭಾರತದ ಅಂದಿನ ರಾಜಕೀಯ, ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳು ತೀರ ಗೊಂದಲಮಯವಾಗಿತ್ತು, ಈ ಎಲ್ಲಾ ಸಮಸ್ಯೆಗಳ ನಿವಾರಣೆ ಒಂದು ದೊಡ್ಡ ಸವಾಲಾಗಿತ್ತು. ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಸೂಕ್ತ ರಾಜಕೀಯ ವ್ಯವಸ್ಥೆಯನ್ನು ರೂಪಿಸಬೇಕಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯರು ಸಂಸತ್ತಿನಲ್ಲಿ ದೀರ್ಘಕಾಲ ಪಾಲಿಸಬೇಕಾದ ಕನಸು ಅರಿತುಕೊಂಡು ಭಾರತೀಯ ಒಕ್ಕೂಟಕ್ಕೆ ಸಂವಿಧಾನವನ್ನು ಅನುಮೋದಿಸಿದ ದಿನ ಇದಾಗಿದೆ. ಪ್ರಜಾಪ್ರಭುತ್ವದ ತಳಹದಿಯಾದ ಸಂವಿಧಾನವನ್ನು ಹಾಗೂ ಮಾನವ ಹಕ್ಕುಗಳನ್ನು ನೀಡಿದ ಈ ಸುದಿನದ ನೆನಪು ಅವಿಸ್ಮರಣೀಯ.
ಸಂವಿಧಾನವೆAದರೆ ಆಳುವ ಪ್ರಮುಖ ನಿಯಮಗಳ ಸಂಯೋಜನೆ. ಅದು ದೇಶದ ಅತ್ಯುನ್ನತ ಮೂಲಭೂತ ಶಾಸನದ ನಿರೂಪಣೆ ಹಾಗೂ ಸರ್ಕಾರದ ಕಾರ್ಯವೈಖರಿಯ ಮೂಲ ಸೆಲೆಯಾಗಿದೆ. ಒಂದು ರಾಜ್ಯ ಕ್ರಮಬದ್ದವಾಗಿ ಜನರಿಗೆ ಹಿತವೆನಿಸುವ ರೀತಿಯಲ್ಲಿ ನಿರಾಂತಕವಾಗಿ ಆಡಳಿತ ನಡೆಸಲು ಸಂವಿಧಾನ ಅತ್ಯವಶ್ಯಕವಾಗಿದೆ ಎಂದು ಹೇಳಿದರು
ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿರುವುದು ವಿಶೇಷವಾಗಿದೆ. ರಾಷ್ಟç ಮಟ್ಟದ ಹಾಕಿ ಕ್ರೀಡಾಕೂಟ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದಿರುವುದು ಒಂದು ದಾಖಲೆಯಾಗಿದೆ.
ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡವರ ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಿದೆ. ಶಕ್ತಿ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ ಜ. 20 ರವರೆಗೆ 33,21,406 ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದು, ಸುಮಾರು 12.83 ಕೋಟಿ ರೂ. ಭರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 1,50,348 ಕುಟುಂಬಗಳು ಹೆಸರು ನೋಂದಾಯಿಸಿದ್ದು, ಇವರಿಗೆ ಉಚಿತ ವಿದ್ಯುತ್ ನೀಡಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 1,10,902 ಆದ್ಯತಾ ಪಡಿತರ ಚೀಟಿ ಕುಟುಂಬಗಳು ಅನ್ನಭಾಗ್ಯ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. 2023ರ ಜುಲೈನಿಂದ 2023ರ ಡಿಸೆಂಬರ್ ತನಕ ಜಿಲ್ಲೆಯಲ್ಲಿ ಒಟ್ಟು 28 ಕೋಟಿ ರೂ. ಗಳನ್ನು ಫಲಾನುಭವಿಗಳ ಖಾತೆಗೆ ವರ್ಗಾ ಮಾಡಲಾಗಿದೆ. ಗೃಹಲಕ್ಷಿö್ಮ ಯೋಜನೆಯಡಿ 2023ರ ಡಿಸೆಂಬರ್ ಅಂತ್ಯದವರೆಗೆ ಒಟ್ಟು 1,13,653 (ಶೇ.86.19) ರಷ್ಟು ಫಲಾನುಭವಿಗಳು ನೋಂದಾಯಿಸಿಕೊAಡಿದ್ದು, ಡಿಸೆಂಬರ್ ಅಂತ್ಯದವರೆಗೆ ಒಟ್ಟು 103.73 ಕೋಟಿ ರೂಪಾಯಿಗಳು ಬ್ಯಾಂಕ್ ಖಾತೆಗೆ ಜಮೆಯಾಗಿದೆ.
ಯುವನಿಧಿ ಯೋಜನೆಯಡಿ ಡಿ. 26 ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊAಡಿದ್ದು ಜ.12 ರಿಂದ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಆರಂಭವಾಗಿದೆ. ಈ ಯೋಜನೆಗೆ ಜ.19 ರ ತನಕ ಜಿಲ್ಲೆಯಲ್ಲಿ 778 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು. ಪದ್ಮ ಪ್ರಶಸ್ತಿಗಳಿಗೆ ಭಾಜನರಾದ ಜಿಲ್ಲೆಯ ರೋಹನ್ ಬೋಪಣ್ಣ ಮತ್ತು ಜೋಶ್ನಾ ಚಿಣ್ಣಪ್ಪ ಅವರಿಗೆ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.