ರ‌್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಸಂತಸ

22 Jaggu 5A
ಬೆಳಗಾವಿ ಕೋಟೆ ಆವರಣದಲ್ಲಿ ಭಾನುವಾರ ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್-2025 ಓಟದ ರ‌್ಯಾಲಿಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು.
Published on

ಬೆಳಗಾವಿ: ಜಿಲ್ಲಾಡಳಿತ, ರಾಜ್ಯ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಭಾನುವಾರ ನಗರದ ಕೋಟೆ ಆವರಣದಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್-2025 ಓಟದ ರ‌್ಯಾಲಿಗೆ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಡಾ.ಕೆ.ಗೋವಿಂದರಾಜ್ ರಾಜು ಚಾಲನೆ ನೀಡಿದರು.

ಅವರು ಮಾತನಾಡಿ, ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ಅಂಗವಾಗಿ ವಿಶ್ವಾದ್ಯಂತ ಓಟ ಆಯೋಜಿಸಿದಂತೆ ಜಿಲ್ಲೆಯಲ್ಲೂ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪೊಲೀಸ್ ಸಿಬ್ಬಂದಿ, ವಿದ್ಯಾರ್ಥಿಗಳು, ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಸಂತಸದ ವಿಷಯ. ಪ್ರತಿಯೊಬ್ಬರು ಕ್ರೀಡಾ ಸ್ಫೂರ್ತಿ ಹೊಂದಿ ಇತರರಿಗೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಪ್ರತಿಯೊಬ್ಬರು ಕ್ರೀಡಾ ಸ್ಫೂರ್ತಿ ಜತೆಗೆ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ರ‌್ಯಾಲಿ ಕೋಟೆ ಆವರಣದಿಂದ ಆರಂಭಗೊಂಡು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ, ಕೃಷ್ಣ ದೇವರಾಯ ವೃತ್ತದ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ತಲುಪಿತು. ಒಲಿಂಪಿಕ್ ಡೇ ಓಟದಲ್ಲಿ ಶಾಲಾ-ಕಾಲೇಜಿನ ಅಂದಾಜು 3,500 ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಸೇರಿ ಸಾರ್ವಜನಿಕರು ಭಾಗವಹಿಸಿದ್ದರು.

ಶಾಸಕ ಆಸೀಫ್ ಸೇಠ್, ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಮಹಾಕಾರ್ಯದರ್ಶಿ ಟಿ.ಅನಂತರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಬಿ.ಶ್ರೀನಿವಾಸ, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net