

ಮಂಡ್ಯ: ನಮ್ಮ ರಾಷ್ಟ ಧ್ವಜ ಪ್ರತಿ ಭಾರತೀಯರ ಸ್ವಂತಿಕೆಯ ಪ್ರತೀಕ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ ಹೇಳಿದರು.
ನಗರದಲ್ಲಿ ಎಸ್.ಡಿ.ಜಯರಾಂ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಎಸ್.ಡಿ.ಜಯರಾಂ ಪ್ಯಾರಾ ಮೆಡಿಕಲ್ ಮತ್ತು ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ಸ್ವಾತಂತ್ರೃ ಅಮೃತ ಮಹೋತ್ಸವದ ಅಂಗವಾಗಿ ಶುಕ್ರವಾರ ಹರ್ ಘರ್ ತಿರಂಗ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ಪ್ರತಿ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಜಾಗೃತಿ ಜಾಥಾದಲ್ಲಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಪ್ರತಿ ಮನೆಯ ಮೇಲೆ ನಮ್ಮ ರಾಷ್ಟ್ರಧ್ವಜವನ್ನು ಹಾರಿಸಿ ದೇಶದೊಂದಿಗೆ ನಮ್ಮ ರಾಷ್ಟ್ರ ಭಕ್ತಿಯನ್ನು ವ್ಯಕ್ತಪಡಿಸಬೇಕು. ಈ ಅಭಿಯಾನವನ್ನ ಎಲ್ಲರು ಸೇರಿ ಯಶಸ್ವಿಗೊಳಿಸೋಣ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕರೆಯಂತೆ ಎಲ್ಲರೂ ರಾಷ್ಟಪ್ರೇಮ ಮೆರೆಯಬೇಕಿದೆ ಎಂದರು.
ಮುಡಾ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಲೋಕಪಾವನಿ ಮಹಿಳಾ ಬ್ಯಾಂಕ್‌ನ ಮಾಜಿ ಅಧ್ಯಕ್ಷೆ ಶಾರದಾ ರಮೇಶ್‌ರಾಜು, ಬಿಜೆಪಿ ಮಾಜಿ ಅಧ್ಯಕ್ಷ ನಾಗಣ್ಣಗೌಡ, ಒಬಿಸಿ ಮೋರ್ಚಾ ಅಧ್ಯಕ್ಷ ರಮೇಶ್ ವಿಶ್ವಕರ್ಮ, ನಾಗರಾಜು, ನಿತ್ಯಾನಂದ, ರವಿ ಇತರರಿದ್ದರು.