‘ಹರ್ ಘರ್ ತಿರಂಗಾ‘ಅಭಿಯಾನ

Tiranga
Published on

ನರಗುಂದ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಹಾಗೂ ದೇಶಪ್ರೇಮ ಸಾರುವ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಆ.9ರಂದು ಬಂಡಾಯ ನಾಡು ನರಗುಂದದಲ್ಲಿ ವಿಧ್ಯುಕ್ತವಾಗಿ ಚಾಲನೆ ದೊರೆಯಲಿದೆ ಎಂದು ಶಾಸಕ ಸಿ.ಸಿ. ಪಾಟೀಲ ತಿಳಿಸಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸ್ವಾತಂತ್ರೃ ಸಂಗ್ರಾಮದಲ್ಲಿ ಬಂಡಾಯದ ನಾಡು ಬಹುಮುಖ್ಯ ಪಾತ್ರ ವಹಿಸಿದೆ. ದೇಶಪ್ರೇಮವನ್ನು ಮತ್ತೊಮ್ಮೆ ಸಾರುವ ಅವಕಾಶ ಒದಗಿ ಬಂದಿದೆ. ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿರುವ ‘ಹರ್ ಘರ್ ತಿರಂಗಾ’ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕರಾದ ಡಾ. ಚಂದ್ರು ಲಮಾಣಿ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹಾಗೂ ಹಲವು ಶಾಸಕರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 12-30ಕ್ಕೆ ಬೈಕ್ ರ‌್ಯಾಲಿಗೆ ಪ್ರಲ್ಹಾದ ಜೋಶಿ ಚಾಲನೆ ನೀಡುವರು. ಬಸವರಾಜ ಬೊಮ್ಮಾಯಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮತಕ್ಷೇತ್ರದ ದೇಶ ಭಕ್ತರು, ಯುವಕರು ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಾಸಕ ಸಿ.ಸಿ. ಪಾಟೀಲ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net