

ಭಟ್ಕಳ: ಸ್ವಾತಂತ್ರ್ಯೊತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ತಾಲೂಕಾಡಳಿತ ವತಿಯಿಂದ ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ತಹಸೀಲ್ದಾರ್ ನಾಗರಾಜ ನಾಯ್ಕಡ್ ಮಂಗಳವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿಯಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದ್ದೇವೆ. ಗ್ರಾಮೀಣ ಭಾಗದಲ್ಲೂ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮ ಏರ್ಪಡಿಸಿದ್ದೇವೆ. ಅದೇ ರೀತಿ ನಮ್ಮ ತಾಲೂಕಿನಲ್ಲಿ ಎಲ್ಲಾ ನೌಕರರು ಹಾಗೂ ಸಾರ್ವಜನಿಕರ ಸಹಾಯದಿಂದ ಹರ್ ಘರ್ ತಿರಂಗಾ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು.
ಬಳಿಕ ತಾಲೂಕಾಡಳಿತ ಸೌಧದಿಂದ ಹೊರಟ ಬೈಕ್ ಜಾಥಾ ಭಟ್ಕಳ ಪುರಸಭೆಯಿಂದ ಮಾರ್ಕೆಟ್ ಮಾರ್ಗವಾಗಿ ಮತ್ತೆ ತಾಲೂಕು ಆಡಳಿತ ಸೌಧಕ್ಕೆ ಬಂದು ಮುಕ್ತಾಯಗೊಂಡಿತು