ರಸ್ತೆ ದುರಸ್ತಿಗೆ ಹಾರನಹಳ್ಳಿ ಗ್ರಾಮಸ್ಥರ ಆಗ್ರಹ

1722345073634
ಅರಸೀಕೆರೆ ತಾಲ್ಲೂಕು ಹಾರನಹಳ್ಳಿ ಬಂದಮ್ಮ ಕಟ್ಟೆಗೆ ಹೋಗುವ ರಸ್ತೆಯಲ್ಲಿ ಎದಿರುವ ಕಬ್ಬಿಣದ ಸರಳುಗಳು.
Published on

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕಸಬಾ ಹೋಬಳಿಯ ಹಾರನಹಳ್ಳಿ ಗ್ರಾಮದ 1ನೇ ಬ್ಲಾಕ್‌ನಲ್ಲಿ ಚನ್ನಕೇಶವ ದೇವಾಲಯದ ಮುಂಭಾಗ ಹಾಗೂ ಬಂದಮ್ಮಕಟ್ಟೆಗೆ ಹೋಗುವ ರಸ್ತೆಯ ಕಾಂಕ್ರೀಟ್ ಕಿತ್ತು ಬಂದು ಕಬ್ಬಿಣದ ಸರಳು ಮೇಲೆದ್ದಿವೆ. ಹೀಗಾಗಿ ಈ ರಸ್ತೆಯಲ್ಲಿ ಓಡಾಡುವ ಪಾದಚಾರಿಗಳು ಕಬ್ಬಿಣ ಸರಳುಗಳಿಂದ ಎಡವಿಬಿದ್ದು ಗಾಯಗೊಳ್ಳುತ್ತಿದ್ದಾರೆ. ಕೂಡಲೇ ಈ ರಸ್ತೆಯ ಮೇಲೆ ಕಾಂಕ್ರೀಟ್ ಹಾಕಿಸಿ ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಎಸ್.ಟಿ.ಜೆ. ಕಾನ್ವೆಂಟ್ ನೂರಾರು ವಿದ್ಯಾರ್ಥಿಗಳು ಈ ರಸ್ತೆಯಲ್ಲಿ ಓಡಾವುದರಿಂದ ಎಡವಿ ಬೀಳುತ್ತಿದ್ದಾರೆ. ರಾತ್ರಿಯ ಸಮಯದಲ್ಲಿ ದ್ವಿಚಕ್ರ ವಾಹನ ಈ ರಸ್ತೆಯಲ್ಲಿ ಓಡಾಡುವುದು ಕಷ್ಟವಾಗಿದೆ. ತಕ್ಷಣ ಗ್ರಾಮ ಪಂಚಾಯತಿ ಅಧಿಕಾರಿಗಳು ಗಮನಹರಿಸುವಂತೆ ಗ್ರಾಪಂ ಮಾಜಿ ಸದಸ್ಯ ಕೃಷ್ಣಪ್ಪ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net