

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಮೂಹದ ವಿಶ್ವದರ್ಶನ ಸಂಭ್ರಮ-2024 ಕಾರ್ಯಕ್ರಮ ಡಿ. 21ರಂದು ನಡೆಯಲಿದ್ದು, ಅದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ.
ಬೆಳಗ್ಗೆ 10ಕ್ಕೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಶಿವರಾಮ ಹೆಬ್ಬಾರ ಉದ್ಘಾಟಿಸಲಿದ್ದು, ಸಂಸ್ಥೆ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಅಧ್ಯಕ್ಷತೆ ವಹಿಸುವರು. ಕೈಬರಹ ಪತ್ರಿಕೆಯನ್ನು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಅನಾವರಣಗೊಳಿಸಲಿದ್ದಾರೆ. ಮಾಜಿ ಶಾಸಕ ವಿ.ಎಸ್. ಪಾಟೀಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಸ್ಥೆಯ ಉಪಾಧ್ಯಕ್ಷ ಶ್ರೀನಿವಾಸ ಹೆಬ್ಬಾರ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಲ್.ಟಿ. ಪಾಟೀಲ, ವಜ್ರಳ್ಳಿ ಸವೋದಯ ಪ್ರೌಢಶಾಲೆಯ ಅಧ್ಯಕ್ಷ ಡಿ. ಶಂಕರ ಭಟ್ಟ, ಎಲ್ಎಸ್ಎಂಪಿ ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೆರೆ, ಅಡಕೆ ವರ್ತಕ ನರಸಿಂಹಮೂರ್ತಿ ಕೋಣೆಮನೆ ಭಾಗವಹಿಸಲಿದ್ದಾರೆ.
ಸಂಜೆ 4ಕ್ಕೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ತಹಸೀಲ್ದಾರ ಯಲ್ಲಪ್ಪ ಗೊನ್ನೆಣ್ಣವರ್ ಉದ್ಘಾಟಿಸಲಿದ್ದು, ಡಿಸಿಎಫ್ ಹರ್ಷ ಭಾನು ಭಾಗವಹಿಸಲಿದ್ದಾರೆ.
ಸಂಜೆ 6 ಕ್ಕೆ ವಿಶ್ವದರ್ಶನ ಪುರಸ್ಕಾರ ಸಮಾರಂಭ ನಡೆಯಲಿದ್ದು, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಉದ್ಘಾಟಿಸಲಿದ್ದಾರೆ. ಹೈಕೋರ್ಟ್ ನ್ಯಾಯವಾದಿ ನಾರಾಯಣ ಯಾಜಿ ಆಶಯ ನುಡಿಗಳನ್ನಾಡಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಅಧ್ಯಕ್ಷತೆ ವಹಿಸುವರು.
ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕಿ ರೂಪಾಲಿ ನಾಯ್ಕ, ಸಂಕಲ್ಪ ಸೇವಾ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ, ಟಿಎಂಎಸ್ ಅಧ್ಯಕ್ಷ ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ, ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಉಮೇಶ ಭಾಗ್ವತ, ಧಾತ್ರಿ ಫೌಂಡೇಶನ್ ಅಧ್ಯಕ್ಷ ಶ್ರೀನಿವಾಸ ಭಟ್ಟ, ವಿಶ್ವದರ್ಶನ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ನರಸಿಂಹ ಕೋಣೆಮನೆ ಭಾಗವಹಿಸಲಿದ್ದಾರೆ. </p>
ವಿಶ್ವದರ್ಶನ ಪುರಸ್ಕಾರ: ಪ್ರತಿ ವರ್ಷ ವಿಶ್ವದರ್ಶನ ಸಂಭ್ರಮದಲ್ಲಿ ಸಾಧಕರನ್ನು ಗುರುತಿಸಿ, ವಿಶ್ವದರ್ಶನ ಪುರಸ್ಕಾರ ನೀಡಿ ಗೌರವಿಸುತ್ತ ಬರುವ ಸಂಪ್ರದಾಯ ಸಂಸ್ಥೆಯದಾಗಿದೆ. ಸಾಧಕರನ್ನು ಗೌರವಿಸುತ್ತ, ವಿದ್ಯಾರ್ಥಿಗಳಲ್ಲಿ ಸಾಧನೆಗೆ ಪ್ರೇರಣೆ ನೀಡುವುದು ಈ ಪುರಸ್ಕಾರದ ಉದ್ದೇಶ. ಅದರಂತೆ ಈ ಬಾರಿ ಸಾಗರದ ಹಿರಿಯ ಸಹಕಾರಿ, ಉದ್ಯಮಿ, ಶಿಕ್ಷಣ ಸಂಸ್ಥೆಗಳ ಹರಿಕಾರ ಹರನಾಥರಾವ್ ಮತ್ತಿಕೊಪ್ಪ ಅವರಿಗೆ ಈ ಬಾರಿಯ ವಿಶ್ವದರ್ಶನ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.