

ಮಡಿಕೇರಿ:
ಶನಿವಾರ ಪ್ರವಾಸಿ ದಿವಸ್ ಹಿನ್ನೆಲೆಯಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ವತಿಯಿಂದ ಸ್ವಚ್ಛ ಸರ್ವೇಷನ್ 2025 ಅಡಿಯಲ್ಲಿ ಹಾರಂಗಿಯಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ನಡೆಸಲಾಯಿತು.
ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿದ ಪ್ರವಾಸಿಗರಿಗೆ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದರ ಅಗತ್ಯತೆಯ ಅರಿವು ಮೂಡಿಸಲಾಯಿತು.
ಪ್ರವಾಸಿ ಸ್ಥಳವಾದ ಹಾರಂಗಿ ಡ್ಯಾಮ್ ಹತ್ತಿರ ಸ್ವಚ್ಛತೆ ಕಾಪಾಡುವ ದೃಷ್ಟಿಯಲ್ಲಿ ರಸ್ತೆ ಬದಿಯಲ್ಲಿರುವ ಹಾಗೂ ಕಸದ ಬುಟ್ಟಿಯಲ್ಲಿರುವ ಕಸವನ್ನು ಸಂಗ್ರಹಿಸಿ ಸ್ವಚ್ಛತೆಯ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಸದಸ್ಯ ಮಣಿಕಂಠ, ಗ್ರಾಮ ಪಂಚಾಯಿತಿಯ ಸಿಬ್ಬಂದಿ ಇದ್ದರು.