ಹರಪನಹಳ್ಳಿಯಲ್ಲಿ ರಸ್ತೆ ಸಂಪರ್ಕ ಕಡಿತ

Published on

ಹರಪನಹಳ್ಳಿ: ನಿರಂತರ ಮಳೆಯಿಂದ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ನದಿ ಪಾತ್ರದಲ್ಲಿನ ಕೃಷಿ ಜಮೀನುಗಳಿಗೆ ನೀರು ನುಗ್ಗಿದೆ.

ಹಲುವಾಗಲು ಮತ್ತು ಗರ್ಭಗುಡಿ ಗ್ರಾಮದ ರಸ್ತೆ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳಕ್ಕೆ ತಹಸೀಲ್ದಾರ್ ಬಿ.ವಿ.ಗಿರೀಶ್ ಬಾಬು ಭೇಟಿ ನೀಡಿ ಪರಿಶೀಲಿಸಿದರು.

ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ನದಿ ಪಾತ್ರಕ್ಕೆ ಹೊಂದಿಕೊಂಡಿರುವ ನಿಟ್ಟೂರು, ಬಸಾಪುರ, ತಾವರಗೊಂದಿ, ನಂದ್ಯಾಲ, ಹಲುವಾಗಲು ಮತ್ತು ಗರ್ಭಗುಡಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ.

ನದಿ ಪಾತ್ರದಲ್ಲಿ ಭತ್ತ, ಮೆಕ್ಕೆಜೋಳ, ಅಡಕೆ ಬೆಳೆಗಳಿಗೆ ನೀರು ನುಗ್ಗಿದೆ. ಈ ಬಗ್ಗೆ ಸಮಿಕ್ಷೆ ಕೈಗೊಳ್ಳಲು ಕ್ರಮವಹಿಸಲಾಗುವುದು. ಹಲುವಾಗಲು ಹಾಗೂ ಗರ್ಭಗುಡಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಮತ್ತು ನದಿ ಪಾತ್ರಕ್ಕೆ ಯಾರು ತೆರಳದಂತೆ ಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net