ಪ್ರತಿಭೆ ಅನಾವರಣಕ್ಕೆ ಕಾರಂಜಿ ಸೂಕ್ತ ವೇದಿಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಸವರಾಜಪ್ಪ ಹೇಳಿಕೆ

KARANJI
ಹರಪನಹಳ್ಳಿ ತಾಲೂಕಿನ ನಿಚ್ಚವ್ವನಹಳ್ಳಿಯಲ್ಲಿ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಬಿಇಒ ಯು.ಬಸವರಾಜಪ್ಪ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಕೊಟ್ರಯ್ಯ, ಗ್ರಾಪಂ ಅಧ್ಯಕ್ಷ ಕೆ.ಆನಂದಪ್ಪ, ಪಿಡಿಒ ಅಂಜಿನಪ್ಪ, ಪ್ರಮುಖರಾದ ಪ್ರಶಾಂತ್ ಪಾಟೀಲ್, ಪರುಶುರಾಮಪ್ಪ, ಭೀಮಪ್ಪ, ಕೆಂಚಪ್ಪ, ಸಿಆರ್‌ಪಿ ಅಬ್ದುಲ್ ಸಲಾಂ ಇತರರಿದ್ದರು.
Published on

ಹರಪನಹಳ್ಳಿ: ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಗುರುತಿಸಿಕೊಳ್ಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಸವರಾಜಪ್ಪ ಹೇಳಿದರು.

ತಾಲೂಕಿನ ನಿಚ್ಚವ್ವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಡಬಗೆರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆ ಹೊರ ತೆಗೆಯಲು ಶಿಕ್ಷಣ ಇಲಾಖೆ ಕಾರಂಜಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ಮುಖಂಡ ವೈ.ಡಿ.ಅಣ್ಣಪ್ಪ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಭವಿಷ್ಯವನ್ನು ಉಜ್ವಲಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು. ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ್ ಸಂಗಪ್ಪನವರ್, ಪ್ರಮುಖರಾದ ಶ್ರೀಕಾಂತ್, ಪದ್ಮಲತಾ, ರಾಮಪ್ಪ, ಬಂದಮ್ಮ, ಮುಖ್ಯಶಿಕ್ಷಕ ಎ.ಎಚ್.ಕೊಟ್ರೇಶ್, ಶಿಕ್ಷಕರಾದ ಬಿ.ಜಕಣಾಚಾರಿ, ಕೆ.ರತ್ನಮ್ಮ, ಜಿ.ಬಸವರಾಜ್, ಕೆ.ಮೌನೇಶಚಾರಿ, ಕೆ.ಎಸ್.ಕುಮಾರಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net