ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು: ಸಂಸದ ವೈ.ದೇವೇಂದ್ರಪ್ಪ ಹೇಳಿಕೆ

07032021 Harapanahalli Janushadha Kendra
Published on

ಹರಪನಹಳ್ಳಿ: ಯಾರೇ ಆಗಿರಲಿ, ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸುತ್ತಾರೆ ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.

ಪಟ್ಟಣದ ಕೊಟ್ಟೂರು ರಸ್ತೆಯಲ್ಲಿ ಭಾನುವಾರ ಜನೌಷಧ ಕೇಂದ್ರ ಉದ್ಘಾಟಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು. ಜನಪ್ರತಿನಿಧಿಗಳು ತಪ್ಪು ಮಾಡಬಾರದು. ರಮೇಶ ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿ-ತಪ್ಪಿನ ಬಗ್ಗೆ ಜನರಿಗೆ ತಿಳಿದಿದೆ. ಕೆಲ ದಿನಗಳಲ್ಲಿ ತನಿಖೆ ಮೂಲಕ ಸತ್ಯಾಂಶ ಹೊರಬೀಳಲಿದೆ ಎಂದು ತಿಳಿಸಿದರು.

ಪಕ್ಕದ ರಾಜ್ಯಗಳಲ್ಲಿ ಕರೊನಾ ಮತ್ತೆ ಹೆಚ್ಚಾಗುತ್ತಿದೆ. ಜನರ ಆರೋಗ್ಯ ದೃಷ್ಟಿಯಿಂದ ಸರಳವಾಗಿ ಕೊಟ್ಟೂರು ಗುರುಬಸವೇಶ್ವರ ರಥೋತ್ಸವ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಆಚರಿಸೋಣ. ಹೋಬಳಿ ಕೇಂದ್ರಗಳಲ್ಲೂ ಜನೌಷಧ ಕೇಂದ್ರಗಳನ್ನು ಆರಂಭಿಸಲು ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಪ್ರಧಾನಿ ಮೇಲೆ ಒತ್ತಡ ತರುವ ಮೂಲಕ ಈ ಭಾಗದಲ್ಲಿ ಹೆಚ್ಚಿನ ರೈಲುಗಳ ಸಂಚಾರಕ್ಕೆ ಆದ್ಯತೆ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net