ಅಂಗವಿಕಲರಿಗೆ ಯೋಜನೆಗಳು ಸಹಕಾರಿ; ಹರಪನಹಳ್ಳಿ ಪುರಸಭೆ ಅಧ್ಯಕ್ಷ ಎಚ್.ಎಂ.ಅಶೋಕ ಅಭಿಮತ

06122022 harapanahalli camara distribution
Published on

ಹರಪನಹಳ್ಳಿ: ಅಂಗವಿಕಲರು ಪರಾವಲಂಬಿಯಾಗದೆ, ಸ್ವಯಂ ಉದ್ಯೋಗದ ಮೂಲಕ ಜೀವನ ರೂಪಿಸಿಕೊಳ್ಳಲು ಪುರಸಭೆಯ ವಿವಿಧ ಯೋಜನೆಗಳು ಸಹಕಾರಿಯಾಗಲಿವೆ ಎಂದು ಪುರಸಭೆ ಅಧ್ಯಕ್ಷ ಎಚ್.ಎಂ.ಅಶೋಕ ಹೇಳಿದರು.

ಪಟ್ಟಣದ ಪುರಸಭೆ ಕಚೇರಿಯಲ್ಲಿ ಮಂಗಳವಾರ ಪುರಸಭೆ ಅನುದಾನದಲ್ಲಿ ಶೇ.5ರಷ್ಟು ಅಂಗವಿಕಲರಿಗೆ ಮೀಸಲಿಟ್ಟಿದ್ದು ಅದರಲ್ಲಿ ಇಬ್ಬರು ಆಯ್ಕೆಯಾದ ಫಲಾನುಭವಿಗಳಿಗೆ ತಲಾ 87 ಸಾವಿರ ರೂ. ಮೌಲ್ಯದ ಡಿಜಿಟಲ್ ಕ್ಯಾಮರಾ ವಿತರಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿ 7 ಜನರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು ಎಂದರು.
ಈ ವೇಳೆ ಪುರಸಭೆ ಅಧ್ಯಕ್ಷರನ್ನು ವಿಕಲಚೇತನರ ಸಂಘದಿಂದ ಸನ್ಮಾನಿಸಲಾಯಿತು. ಪುರಸಭೆ ಸದಸ್ಯರಾದ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net