ಜು.6ರವರೆಗೆ ಖಾಸಗಿ ಬಸ್ ಓಡಾಡೊಲ್ಲ

bus 2
Published on

ಹರಪನಹಳ್ಳಿ: ಖಾಸಗಿ ಬಸ್‌ಗಳನ್ನು ಜು.6 ರವರೆಗೆ ರಸ್ತೆಗೆ ಇಳಿಸದಿರಲು ತೀರ್ಮಾನಿಸಲಾಗಿದೆ ಎಂದು ದಾವಣಗೆರೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕಂಬತ್ತಹಳ್ಳಿ ಎಸ್.ಮಂಜುನಾಥ ತಿಳಿಸಿದ್ದಾರೆ.

ಜೂ.28ರಂದು ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯ ಮತ್ತು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಮಾವೇಶದಲ್ಲಿ ಈ ತೀರ್ಮಾನ ಕೈಗೊಂಡಿದ್ದು. ಮುಂದಿನ ಆರು ತಿಂಗಳು ಖಾಸಗಿ ಬಸ್‌ಗಳಿಗೆ ತೆರಿಗೆ ರಿಯಾಯಿತಿ ನೀಡುವುದು ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಶೀಘ್ರವೇ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ. ಇದಕ್ಕೆ ಮುಖ್ಯಮಂತ್ರಿ ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಅರಿತು ಬಸ್‌ಗಳ ಓಡಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕಾರ್ಯದರ್ಶಿ ಎಂ.ಆರ್.ಸತೀಶ್, ಖಜಾಂಚಿ ಎಚ್.ಎಸ್.ಮಹೇಶ್, ನಿರ್ದೇಶಕರಾದ ಎಂ.ಎನ್.ಹರೀಶ್ ಇತರರು ಸಭೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net