ಟಿಕೆಟ್ ಕೇಳುವುದರಲ್ಲಿ ತಪ್ಪೇನಿಲ್ಲ

MP Siddeshwar
ಜಿ.ಎಂ.ಸಿದ್ದೇಶ್ವರ
Published on

ಹರಪನಹಳ್ಳಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರ ಹಿಡಿಯಲಿದೆ ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಪಂಚದ ನಾಯಕರಾಗಿ ಹೊರಹೊಮ್ಮಿದ್ದಾರೆ. ರಾಹುಲ್ ಗಾಂಧಿ ಅವರು ಎಷ್ಟೇ ಪಾದಯಾತ್ರೆಗಳನ್ನು ಮಾಡಿದರೂ ಪ್ರಭಾವ ಬೀರಿಲ್ಲ.ಅವರು ದೇಶದಲ್ಲಿ ಅಧಿಕಾರಕ್ಕೆ ಬರುವುದು ಕಷ್ಟವಾಗಿದ್ದು, ಬಿಜೆಪಿ ಅಧಿಕಾರಕ್ಕೆ ಬರವುದು ನಿಶ್ಚಿತ ಎಂದರು.

ಬಿಜೆಪಿಯಲ್ಲಿ ಯಾರು ಬೇಕಾದರೂ ಟಿಕೆಟ್ ಕೇಳಬಹುದು. ಅದೇ ರೀತಿಯಲ್ಲಿ ಹೊನ್ನಾಳಿಯ ಎಂ.ಪಿ.ರೇಣುಕಾಚಾರ್ಯ ಅವರು ಲೋಕಸಭೆ ಟಿಕೆಟ್ ಕೇಳಿರಬಹುದು. ಅದರಲ್ಲಿ ತಪ್ಪೇನಿದೆ?. ನಾನೂ ದಾವಣಗೆರೆ ಲೋಕಸಭಾ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದರು.

ಶಾಸಕರು ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ, ಸಚಿವರನ್ನು ಭೇಟಿಯಾಗುವುದು ಸಹಜ. ಅದಕ್ಕೆ ಆಪರೇಷನ್ ಹಸ್ತ ಎನ್ನುವುದು ಸರಿಯಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net