ಸಂಚರಿಸುತ್ತಿದ್ದ ರೈಲಲ್ಲಿ ಯುವತಿಗೆ ಕಿರುಕುಳ

harassment
Published on

ಕಾಸರಗೋಡು: ಸಂಚರಿಸುತ್ತಿದ್ದ ರೈಲಲ್ಲಿ ಯುವತಿಗೆ ಕಿರುಕುಳ ನೀಡಲೆತ್ನಿಸಿದ ಹುಬ್ಬಳ್ಳಿ ರಾಮನಗರದ ಕೋಡುಪಾಳ ನಿವಾಸಿ ರಾಜಶೇಖರ ಎಂಬಾತನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಮಂಗಳೂರು-ತಿರುನಂತಪುರ ಎಕ್ಸ್‌ಪ್ರೆಸ್ ರೈಲಲ್ಲಿ ಪ್ರಯಾಣಿಸುತ್ತಿದ್ದ 20ರ ಹರೆಯದ ಯುವತಿಗೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದ. ಈ ಬಗ್ಗೆ ಯುವತಿ ಕಾಸರಗೋಡು ರೈಲ್ವೆ ಪೊಲೀಸರಿಗೆ ನೀಡಿದ ದೂರಿನನ್ವಯ ಈತನನ್ನು ಬಂಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net