ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದಾತ ಅಂದರ್

child rape
Published on

ಕಾಸರಗೋಡು: ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪತ್ತನಂತಿಟ್ಟ ನಿವಾಸಿ ಅಮಲ್(21)ಎಂಬಾತನನ್ನು ಕಾಸರಗೋಡು ಚೀಮೇನಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ಮಂಗಳವಾರದಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಅಲ್ಲಿನ ಪೊಲೀಸ್ ಠಾಣೆಗೆ ಬಾಲಕಿ ತಂದೆ ದೂರು ನೀಡಿದ್ದರು. ಈಕೆಯ ಮೊಬೈಲ್ ಲೊಕೇಶನ್ ಆಧಾರದಲ್ಲಿ ಚೀಮೇನಿಯಲ್ಲಿರುವ ಮಾಹಿತಿ ಲಭಿಸಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ತೆಗೆದುಕೊಂಡಿದ್ದರು.

ಬಲವಂತವಾಗಿ ಕಾಸರಗೋಡಿಗೆ ಕರೆದುಕೊಂಡು ಬಂದು, ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕಿ ಪೊಲೀಸರಲ್ಲಿ ತಿಳಿಸಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net