

ಸಿರಿಗೇರಿ: ಗ್ರಾಮದ ಶಿಕ್ಷಣ ಪ್ರೇಮಿಗಳು, ಸಂಘಟನೆಗಳ ಪ್ರಮುಖರು ಕಾಲೇಜಿನಲ್ಲಿ ಮೂಲ ಸೌಕರ್ಯ ಒದಗಿಸಲು ಸಹಕರಿಸಿದ್ದಾರೆ ಎಂದು ಪ್ರಾಚಾರ್ಯ ಎಚ್.ಜೆ.ವಿಶ್ವನಾಥಗೌಡ ಹೇಳಿದರು. ಗ್ರಾಮದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಹೆಚ್ಚುಸಲು ಅತಿಥಿ ಉಪನ್ಯಾಸಕರು ಸಹಕರಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ಪ್ರಥಮ ವರ್ಷಕ್ಕೆ 20 ವಿದ್ಯಾರ್ಥಿಗಳು ದಾಖಲಾಗಿದ್ದು, ದ್ವಿತೀಯ ಪಿಯುಸಿಯಲ್ಲಿ 32 ವಿದ್ಯಾರ್ಥಿಗಳಿದ್ದಾರೆ. ಮುಂದಿನ ವರ್ಷ ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಲಾಗುವುದು ಎಂದರು. ನಿಮಗಾಗಿ ನಾವು ಸಂಸ್ಥೆಯ ಗ್ರಾಮ ಘಟಕ ಪದಾಧಿಕಾರಿಗಳಾದ ವಿ.ಹನುಮೇಶ, ಬಿ.ಪುನೀತ್ ಕುಮಾರ್, ಪತ್ರಕರ್ತ ಶಿವರಾಮ್ ಇತರರಿದ್ದರು.