ಉತ್ತಮ ಫಲಿತಾಂಶಕ್ಕೆ ಕಠಿಣ ಪರಿಶ್ರಮ ಅಗತ್ಯ

ಸಿರಿಗೇರಿಯ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಶಾರದಾ ಪೂಜೆ ಕಾರ್ಯಕ್ರಮ ನಡೆಯಿತು. ಪ್ರಾಚಾರ್ಯ ಎಚ್.ಜಿ.ವಿಶ್ವನಾಥ್, ಉಪನ್ಯಾಸಕರಾದ ಬಸವರಾಜ್, ಈರಣ್ಣ, ನಿತಿನ್ ಕುಮಾರ್, ರಂಗಪ್ಪ, ರಾಘವೇಂದ್ರ ಇತರರಿದ್ದರು.

Published on

ಸಿರಿಗೇರಿ: ವಿದ್ಯಾರ್ಥಿಗಳು ಸಮಯ ಪಾಲನೆಯೊಂದಿಗೆ ಅಚ್ಚುಕಟ್ಟಾಗಿ ವಿದ್ಯಾಭ್ಯಾಸ ಮಾಡಿಲಿ ಎಂದು ಪ್ರಾಚಾರ್ಯ ಎಚ್.ಜಿ.ವಿಶ್ವನಾಥ್ ಗೌಡ ಹೇಳಿದರು.

ಗ್ರಾಮದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಶಾರದಾ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಆಗಿರುವ ಪಾಠಗಳ ಪುನರಾವರ್ತನೆ ಜತೆ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸಬೇಕು. ಉತ್ತಮ ಫಲಿತಾಂಶಕ್ಕೆ ಕಠಿಣ ಪರಿಶ್ರಮ ಅಗತ್ಯ ಎಂದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಪನ್ಯಾಸಕರಾದ ಬಸವರಾಜ್, ಈರಣ್ಣ, ನಿತಿನ್ ಕುಮಾರ್, ರಂಗಪ್ಪ, ರಾಘವೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net