ಹರ್ ಘರ್ ತಿರಂಗ ಕಾರ್ಯಕ್ರಮ

14mdk02
Published on

ಮಡಿಕೇರಿ:

ವಕೀಲರ ಸಂಘದ ವತಿಯಿಂದ ಇಲ್ಲಿನ ಹರ್ ಘರ್ ತಿರಂಗ ಕಾರ್ಯಕ್ರಮದಡಿಯಲ್ಲಿ ರಾಷ್ಟ್ರಧ್ವ್ವಜವನ್ನು ಪ್ರತೀ ಮನೆಯಲ್ಲಿ ಹಾರಿಸುವ ಕಾರ್ಯಕ್ರಮಕ್ಕೆ ನ್ಯಾಯಾಲಯ ಆವರಣದಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ಯಾಮ್ ಪ್ರಸಾದ್, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಪ್ರಶಾಂತಿ, ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಕೆ.ಬಿ. ಪ್ರಸಾದ್, ಸಿವಿಲ್ ನ್ಯಾಯಾಧೀಶರಾದ ಮುನಿರತ್ನ, ನಾಗೇಶ್, ವಕೀಲರ ಸಂಘದ ಅಧ್ಯಕ್ಷ ಎಂ.ಎ. ನಿರಂಜನ್, ಕಾರ್ಯದರ್ಶಿ ಡಿ.ಎಂ.ಕೇಶವ, ಸಂಘದ ಸದಸ್ಯರು, ನ್ಯಾಯಾಲಯದ ಆಡಳಿತಾಧಿಕಾರಿ ಕೆಂಪರಾಜು, ನ್ಯಾಯಾಲಯದ ಸಿಬ್ಬಂದಿವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net