ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ 15 ಕ್ಕೆ ನೇತ್ರ ತಪಾಸಣಾ ಶಿಬಿರ

eye
Published on

ಹರಿಹರ: ತಾಲೂಕಿನ ಕೊಂಡಜ್ಜಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೆ.15 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ರವರೆಗೆ ಉಚಿತ ನೇತ್ರ ತಪಾಸಣಾ ಮತ್ತು ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.

ಶಾಮನೂರು ಶಿವಶಂಕರಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ ಹಾಗೂ ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ ಸಹಯೋಗದಲ್ಲಿ ಶಿಬಿರ ನಡೆಯಲಿದೆ.

ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರನ್ನು ಅಂದೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುವುದು. ಆದ್ದರಿಂದ ಶಿಬಿರಕ್ಕೆ ಬರುವಾಗಲೇ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ನಕಲು ಪ್ರತಿ, 2 ಪಾಸ್‌ಪೋರ್ಟ್ ಅಳತೆ ಫೋಟೊ, ತಟ್ಟೆ, ಲೋಟ ತರಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net