

ನಗರದ ಗುರುಭವನದಲ್ಲಿ ಶುಕ್ರವಾರ ತಾಲೂಕು ಆಡಳಿತ, ತಾಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯೋಜನೆಯ ಪ್ರಮುಖಾಂಶಗಳು
ಮಕ್ಕಳ ಬೆಳವಣಿಗೆಯ ಕುಂಠಿತ ಹಾಗೂ ಅಪೌಷ್ಟಿಕತೆ ತಡೆಗಟ್ಟುವಿಕೆ, ರಕ್ತಹೀನತೆಯ ನಿವಾರಣೆ, ಕಡಿಮೆ ತೂಕದ ಶಿಶುಗಳ ಜನನ ಪ್ರಮಾಣವನ್ನು ಕಡಿಮೆಗೊಳಿಸುವುದು ಈ ಅಭಿಯಾನದ ಪ್ರಮುಖ ಗುರಿಯಾಗಿದೆ. ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಲ್ಲಿ ಪೋಷಕಾಂಶದ ಫಲಿತಾಂಶವನ್ನು ಸುಧಾರಿಸುವುದು ಈ ಯೋಜನೆಯ ಪ್ರಮುಖ ಅಂಶವಾಗಿದೆ ಎಂದು ಶಾಸಕರು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ಮಾತನಾಡಿ, ಸರ್ಕಾರದ ಇಂತಹ ಹಲವು ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಬಹಳಷ್ಟಿದೆ. ಹಾಗಾಗಿ, ಸರ್ಕಾರವು ಅವರಿಗೆ ಸಕಾಲಕ್ಕೆ ವೇತನ ನೀಡುವ ಮೂಲಕ ಅವರ ಸೇವೆಯನ್ನು ಗೌರವಿಸಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸಿಡಿಪಿಒ ಪ್ರಿಯದರ್ಶಿನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹನುಮಂತಪ್ಪ ಲಮಾಣಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ನಾಗರಾಜ್, ಶಿಕ್ಷಕ ಬಸವರಾಜಯ್ಯ, ಶಿಶು ಅಭಿವೃದ್ಧಿ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.