ಶಾಲೆ ಕೊಠಡಿ ಬಾಗಿಲು ಮುರಿದು ಕಳವು

HRR SHALE 19 edit
ಹರಿಹರ ತಾಲೂಕಿನ ಬೆಳ್ಳೂಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಬಾಗಿಲು ಮುರಿದಿರುವ ಕಳ್ಳರು.
Published on

ಹರಿಹರ: ತಾಲೂಕಿನ ಬೆಳ್ಳೂಡಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಗಿಲು ಮುರಿದು ಕ್ರೀಡಾ ಪರಿಕರಗಳನ್ನು ಕಳವು ಮಾಡಲಾಗಿದೆ.

ಕ್ರೀಡಾ ಸಾಮಗ್ರಿ ಕಳವಿನ ಜತೆಗೆ ನಲಿ-ಕಲಿ ಕೊಠಡಿಯಲ್ಲಿದ್ದ ದಾಖಲೆಗಳನ್ನು ನಾಶಪಡಿಸಲಾಗಿದೆ. ಕೆಲ ಪುಸ್ತಕ ಮತ್ತು ನೋಟ್ ಬುಕ್‌ಗಳನ್ನು ಸುಟ್ಟು ಹಾಕಲಾಗಿದೆ.

ವಿಷಯ ತಿಳಿದ ಶಾಲೆ ಮುಖ್ಯ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ, ಸದಸ್ಯರು ಶಾಲೆಗೆ ಭೇಟಿ ನೀಡಿ ಕಳ್ಳರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಪಂ ಅಧ್ಯಕ್ಷರಿಗೆ ದೂರು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net