ಹರಿಹರದಲ್ಲಿ ದೇವರಾಜ ಅರಸು ಜನ್ಮದಿನ

arasu
Published on

ಹರಿಹರ: ನಗರದ ಗುರುಭವನದಲ್ಲಿ ಭಾನುವಾರ ಬೆಳಗ್ಗೆ 11 ಗಂಟೆಗೆ ಡಿ. ದೇವರಾಜ ಅರಸು 108ನೇ ಜನ್ಮದಿನಾಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ತಾಲೂಕು ಆಡಳಿತ, ತಾಪಂ, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಮಾರಂಭ ಆಯೋಜಿಸಲಾಗಿದೆ.

ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಲಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದ ಜಿ.ಎಂ. ಸಿದ್ದೇಶ್ವರ, ವಿಪ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ, ಕೆ. ಅಬ್ಬುಲ್ ಜಬ್ಬಾರ್, ಕೆ.ಎಸ್. ನವೀನ್, ಚಿದಾನಂದ ಎಂ. ಗೌಡ, ನಗರಸಭೆ ಅಧ್ಯಕ್ಷೆ ನಿಂಬಕ್ಕ ಚಂದಾಪುರ ಅತಿಥಿಗಳಾಗಿ ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net