ನೈಸರ್ಗಿಕ ಸಂಪತ್ತಿನ ರಕ್ಷಣೆಗೆ ದೃಢ ಸಂಕಲ್ಪ ಅಗತ್ಯ

harihara
Published on

ಹರಿಹರ: ನೈಸರ್ಗಿಕ ಸಂಪತ್ತಿನ ಸಂರಕ್ಷಣೆಗೆ ನಾವು ದೃಢ ಸಂಕಲ್ಪ ಮಾಡಬೇಕಿದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.

ತಾಲೂಕಿನ ಭಾನುವಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಭಿವೃದ್ಧಿ ಹೆಸರಿನಲ್ಲಿ ಪರಿಸರ ಮತ್ತು ಅರಣ್ಯ ಸಂಪತ್ತನ್ನು ನಾಶ ಮಾಡಲಾಗುತ್ತಿದೆ. ಸ್ವಯಂಪ್ರೇರಣೆಯಿಂದ ಇದರ ಸಂರಕ್ಷಣೆಗೆ ಮುಂದಾಗಬೇಕಾದ ಅನಿವಾರ್ಯ ಇದೆ ಎಂದರು.

ಧರ್ಮಸ್ಥಳ ಸಂಸ್ಥೆಯು ಮಕ್ಕಳಲ್ಲಿ ಪರಿಸರ ಸಂರಕ್ಷಣೆಯ ಪ್ರಜ್ಞೆ ಮೂಡಿಸುವ ಶ್ರೇಷ್ಠ ಕಾರ್ಯ ಮಾಡುತ್ತಿದೆ. ವೀರೇಂದ್ರ ಹೆಗ್ಗಡೆಯವರು ರಾಜ್ಯಾದ್ಯಂತ ಹಲವಾರು ಅರ್ಥಪೂರ್ಣ ಕಾರ್ಯಗಳನ್ನು ಅನುಷ್ಠಾನ ಮಾಡುತ್ತಿದ್ದಾರೆ. ಇಂತಹ ಕಾರ್ಯಗಳಿಗೆ ಸಹಕರಿಸುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ ಎಂದರು.

ದಾವಣಗೆರೆ ಜಿಲ್ಲಾ ಹಿರಿಯ ನಿರ್ದೇಶಕ ವಿ.ವಿಜಯಕುಮಾರ್ ನಾಗನಾಳ ಮಾತನಾಡಿ, ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸಿದರೆ ಸಂರಕ್ಷಣೆಯಾಗಲು ಸಾಧ್ಯ. ಪ್ರತಿ ಮಕ್ಕಳು ಒಂದು ಗಿಡ ಬೆಳೆಸುವ ಮೂಲಕ ಪರಿಸರವನ್ನು ಹಸಿರಾಗಿಸಬೇಕು ಎಂದರು.

ಸಾಹಿತಿ ಅಣ್ಣಪ್ಪ ಮಾತನಾಡಿ, ಪರಿಸರ ಉಳಿದರೆ ನಾವು ಬದುಕಲು ಸಾಧ್ಯ ಎಂದರು. ಸಂಸ್ಥೆಯ ತಾಲೂಕು ಹಿರಿಯ ಯೋಜನಾಧಿಕಾರಿ ಗಣಪತಿ ಮಾಳಂಜಿ, ತಾಪಂ ಮಾಜಿ ಅಧ್ಯಕ್ಷ ಎಚ್. ಕನ್ನಪ್ಪ, ಮುಖ್ಯಶಿಕ್ಷಕ ಹನುಮಂತಪ್ಪ, ಮಂಜುಳಾ ವೀರೇಶ, ಪ್ರೇಮಾ ರಮೇಶ, ಕರಿಯಪ್ಪ, ನಿವೃತ್ತ ಶಿಕ್ಷಕ ಸಿದ್ದಪ್ಪ, ಬಿ.ಎಂ.ರಾಚಪ್ಪ, ರೈತ ಸಂಘದ ಅಧ್ಯಕ್ಷ ಕೋಟ್ರೇಶಪ್ಪ, ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ದಾಕ್ಷಾಯಣ್ಣಮ್ಮ, ಅನಿತಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net