ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಶುರು

HARIHARA MP SIDDESHWAR
Published on

ಹರಿಹರ: ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಕೆ.ಎಸ್.ಈಶ್ವರಪ್ಪ ತಮ್ಮ ಇಲಾಖೆಯಿಂದ 5 ಕೋಟಿ ವಿಶೇಷ ಅನುದಾನ ನೀಡುವ ಮೂಲಕ ನಮ್ಮ ಅಭಿವೃದ್ಧಿ ಕನಸಿಗೆ ಸಹಕರಿಸಿದ್ದಾರೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.

ತಾಲೂಕಿನ ಹನಗವಾಡಿ ಗ್ರಾಮದಲ್ಲಿ ಭಾನುವಾರ 1 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಅಭಿವೃದ್ಧಿಯ ಪರ್ವ ಶುರುವಾಗಿದೆ. ತಾಲೂಕಿನ ಸಮಗ್ರ ಏಳಿಗೆಗಾಗಿ ಪಣತೊಟ್ಟಿದ್ದು, ವಿವಿಧ ಇಲಾಖೆಗಳ ವಿಶೇಷ ಅನುದಾನ ತರುವ ಪ್ರಯತ್ನ ಮಾಡಲಾಗುವುದು ಎಂದರು.

ಮಾಜಿ ಶಾಸಕ ಬಿ.ಪಿ.ಹರೀಶ್ ಮಾತನಾಡಿ, ರಾಜ್ಯ ಮತ್ತು ಕೇಂದ್ರದಲ್ಲಿ ನಮ್ಮದೇ ಪಕ್ಷದ ಸರ್ಕಾರ ಇದ್ದು, ಅಭಿವೃದ್ಧಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್.ಎಂ.ವೀರೇಶ್ ಹನಗವಾಡಿ ಮಾತನಾಡಿದರು. ಜಿಪಂ ಸದಸ್ಯ ಬಿ.ಎಂ.ವಾಗೀಶ್ ಸ್ವಾಮಿ, ತಾಪಂ ಆಧ್ಯಕ್ಷೆ ಶ್ರೀದೇವಿ ಮಂಜಪ್ಪ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಲಿಂಗರಾಜ್, ಪಿಡಿಒ ರೇಣುಕಾಬಾಯಿ, ಮಹೇಶ್ ಬಣಕಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net