ಭೂಮಿ ರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸಿ

HRR GIDA 021 hrr 2
Published on

ಹರಿಹರ: ಭೂಮಿ ತಾಯಿಯನ್ನು ರಕ್ಷಿಸೋಣ ಮುಂದಿನ ಪೀಳಿಗೆಗೆ ವರ್ಗಾಯಿಸೋಣ ಎಂಬುದು ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರ ಮಾತು, ಅದರಂತೆ ನಮ್ಮ ಸುತ್ತಮುತ್ತಲ ಪರಿಸರ ಉಳಿಸಿ ಮತ್ತು ಬೆಳೆಸುವ ಜವಾಬ್ದಾರಿ ನಮ್ಮದು ಎಂದು ಎಸ್‌ಕೆಡಿಆರ್‌ಡಿಪಿ ಸಂಸ್ಥೆಯ ಯೋಜನಾಧಿಕಾರಿ ಗಣಪತಿ ಮಾಳಂಜಿ ಹೇಳಿದರು.

ತಾಲೂಕಿನ ಖಡರನಾಯಕನಹಳ್ಳಿಯ ಶಾಲಾ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬುಧವಾರ ಹಮ್ಮಿಕೊಂಡಿದ್ದ ಪರಿಸರ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮಾನವ ಪರಿಸರದ ಮೇಲಿನ ದೌರ್ಜನ್ಯ ಕಡಿಮೆ ಮಾಡಬೇಕು. ನಾವುಗಳು ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಮಾಲಿನ್ಯ ಮಾಡುವುದನ್ನು ಗರಿಷ್ಠ ಪ್ರಮಾಣದಲ್ಲಿ ನಿರ್ಭಂಧಿಸಬೇಕು. ಪರಿಸರ ಸಂರಕ್ಷಣೆ ಕೂಡ ದೇಶ ಸೇವೆಯಷ್ಟೇ ಮುಖ್ಯ ಎಂದರು.

ಎಸ್‌ಡಿಎಂಸಿ ಅಧ್ಯಕ್ಷರಾದ ನಾಗನಗೌಡ, ಒಕ್ಕೂಟದ ಅಧ್ಯಕ್ಷ ನಟರಾಜ್, ಸ್ಥಳೀಯ ಮುಖಂಡ ಪರಮೇಶ್ವರಪ್ಪ, ಕೃಷಿ ಮೇಲ್ವಿಚಾರಕರಾದ ಗುರುರಾಜ್, ಮೇಲ್ವಿಚಾರಕರಾದ ಪ್ರವೀಣ್, ಸೇವಾಪ್ರತಿನಿಧಿ ವೇದಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net