

ಮೂಲ್ಕಿ: ಕಾರ್ನಾಡು ಶ್ರೀ ಹರಿಹರ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ವಿಶೇಷ ಪ್ರಾರ್ಥನೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಶ್ರೀರಂಗ ಪೂಜೆ, ದೀಪೋತ್ಸವ, ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಎಚ್.ಅರವಿಂದ ಪೂಂಜ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀವನ್ ಶೆಟ್ಟಿ ಕಾರ್ನಾಡ್, ಮುಲ್ಕಿ ನಗರ ಪಂಚಾಯಿತಿ ಸದಸ್ಯ ಹರ್ಷರಾಜ ಶೆಟ್ಟಿ , ಪ್ರವೀಣ್ ಕೋಟ್ಯಾನ್, ಶರತ್ ಕಾರ್ನಾಡ್, ಹರಿಹರ ಯುವಕ ವೃಂದ, ಮಹಿಳಾ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.