

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯನ್ನು ಇನ್ನೊಂದು ಮಲಪ್ಪುರಂ ಮಾಡಲು ಮುಸ್ಲಿಂ ಲೀಗ್ ರಹಸ್ಯ ಯೋಜನೆ ರೂಪಿಸಿದೆ. ಇದರ ಭಾಗವಾಗಿ ಹಿಂದುಗಳ ಶ್ರದ್ಧಾಕೇಂದ್ರ ಧರ್ಮಸ್ಥಳದ ಹೆಸರು ಕೆಡಿಸಲು ವ್ಯವಸ್ಥಿತ ಷಡ್ಯಂತ್ರ ನಡೆದಿದೆ. ಈ ಷಡ್ಯಂತ್ರವನ್ನು ಬಯಲುಗೊಳಿಸಲು ಎನ್‌ಐಎ, ಸಿಬಿಐ, ಇಡಿ ತನಿಖೆ ನಡೆಸಬೇಕು ಎಂದು ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಒತ್ತಾಯಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ದ.ಕ.ಜಿಲ್ಲೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಅವಕಾಶ ನೀಡಲು ಮುಸ್ಲಿಂಲೀಗ್ ಪಕ್ಷ ಈಗ ಕಾಂಗ್ರೆಸ್ ಜತೆಗೂಡಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ಹೆಸರು ಕೆಡಿಸಲಾಗುತ್ತಿದೆ. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸುವಲ್ಲಿ ಕೇರಳದ ಜಿಹಾದಿ ಶಕ್ತಿಗಳು ಹಾಗೂ ತಮಿಳುನಾಡಿನ ಸಂಸದರೊಬ್ಬರ ಕೈವಾಡವಿದೆ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೇರಳ ಮತ್ತು ತಮಿಳುನಾಡಿನ ಒತ್ತಡದಿಂದ ಧರ್ಮಸ್ಥಳದಲ್ಲಿ ಅನಾಮಿಕನ ದೂರಿನ ತನಿಖೆಗೆ ಎಸ್‌ಐಟಿ ರಚಿಸಲಾಗಿದೆ. ಸಮೀರ್ ಎಂಬ ಯೂಟ್ಯೂಬರ್‌ನನ್ನು ಬಂಧಿಸಿ ಮಂಪರು ಪರೀಕ್ಷೆ ನಡೆಸಬೇಕು. ಧರ್ಮಸ್ಥಳದ ದೂರುದಾರ ಅನಾಮಿಕ ಆರಂಭದಲ್ಲಿ ಮಾನವನ ತಲೆಬುರುಡೆಯನ್ನು ಎಲ್ಲಿಂದ ತಂದಿದ್ದಾನೆ ಎಂಬ ಬಗ್ಗೆ ಇದುವರೆಗೆ ತನಿಖೆ ಆಗಿಲ್ಲ. ಧರ್ಮಸ್ಥಳದಲ್ಲಿ ಉತ್ಖನಕ್ಕೆ ನ್ಯಾಯಾಲಯ ಆದೇಶ ನೀಡಿದೆಯೇ ಎಂಬುದನ್ನು ತಿಳಿಸಬೇಕು. ಉಳ್ಳಾಲದ ಧಾರ್ಮಿಕ ಸ್ಥಳದಲ್ಲಿ ಉತ್ಖನನಕ್ಕೆ ಒತ್ತಾಯಿಸಿದರೆ ಕಾಂಗ್ರೆಸ್ ಸರ್ಕಾರ ಅನುಮತಿ ನೀಡುತ್ತದೆಯೇ ಎಂದು ಅವರು ಪ್ರಶ್ನಿಸಿದರು.
ಚಿಕ್ಕಮಗಳೂರಿನ ದತ್ತಪೀಠದಲ್ಲಿ ಗೋರಿಗಳಿವೆ ಎಂದು ಹೇಳಲಾಗುತ್ತಿದೆ. ಅವು ದೇಶವನ್ನು ದರೋಡೆ ಮಾಡಲು ಬಂದವರ ಗೋರಿಗಳು ಎಂಬ ಸಂಶಯವಿದೆ. ಈ ಬಗ್ಗೆ ದತ್ತಪೀಠದಲ್ಲಿ ಉತ್ಖನನ ನಡೆಸಿ ರಾಜ್ಯ ಸರ್ಕಾೃ ಜನರಿಗೆ ಸತ್ಯ ತಿಳಿಸಬೇಕು ಎಂದು ವರು ಹೇಳಿದರು.
ಬಿಜೆಪಿ ಮಹಿಳಾ ಮೋರ್ಚಾಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಒಬಿಸಿ ಮೋರ್ಚಾಜಿಲ್ಲಾಧ್ಯಕ್ಷ ಮಹೇಶ್ ಜೋಗಿ, ಜಿಲ್ಲಾ ವಕ್ತಾರರಾದ ರಾಜಗೋಪಾಲ ರೈಘಿ, ಅರುಣ್ ಜಿ. ಶೇಟ್ ಉಪಸ್ಥಿತರಿದ್ದರು.