ದಾಸೋಹಿ ಪ್ರಶಸ್ತಿಗೆ ಹರಿಕೃಷ್ಣ ಪುನರೂರು ಆಯ್ಕೆ

Mul_Hari-Krishna
Published on

ಮೂಲ್ಕಿ: ಸಾಹಿತ್ಯ, ಲಲಿತಕಲಾ, ಸಾಮಾಜಿಕ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸಿದ ಗಣ್ಯರಿಗೆ ಚುಟುಕು ಸಾಹಿತ್ಯ ಪರಿಷತ್ ಪ್ರತಿವರ್ಷ ನೀಡುವ ಪ್ರತಿಷ್ಠಿತ ದಾಸೋಹಿ ಪ್ರಶಸ್ತಿಗೆ ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಚುಸಾಪ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.

ಸೆ.5 ರಂದು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಜರುಗಲಿರುವ ಕಚುಸಾಪ ರಾಜ್ಯಶಿಕ್ಷಕ ಸಾಹಿತಿಗಳ ಏಳನೆಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಸಾರಾಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡ ಶೆಟ್ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net