

ಮಡಿಕೇರಿ:
ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ದಾಂಧಲೆ ಎಸಗಲಾಗಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಹಾರಾಷ್ಟ್ರದಲ್ಲಿ ಸುಮಾರು 60 ಲಕ್ಷ ಮತದಾರರ ಸಂಖ್ಯೆ ಜಾಸ್ತಿಯಾಗಿತ್ತು.
ಕರ್ನಾಟಕದಲ್ಲೂ ಹಲವು ಕ್ಷೇತ್ರದಲ್ಲಿ ಮತಗಳ ಕಳ್ಳತನ ಆಗಿದೆ.
ಇದರ ವಿರುದ್ದ ರಾಹುಲ್ ಗಾಂಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಮೂಲಕ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗುತ್ತದೆ. ಕರ್ನಾಟಕದ ಕೆಲವು
ಕೆಲವು ಕ್ಷೇತ್ರಗಳಲ್ಲಿ ಅಕ್ರಮ ನಡೆದಿದೆ. ವಲಸೆ ಬಂದರವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದರು.
ಗೃಹ ಸಚಿವ ಪರಮೇಶ್ವರ್ ದಲಿತ ಶಾಸಕರು, ಸಚಿವರಿಗೆ ಮತ್ತೆ ಡೀನರ್ ಹೆಸರಿನಲ್ಲಿ ಪ್ರತ್ಯೇಕ ಸಭೆ ನಡೆಸುವ ವಿಚಾರಕ್ಕೆ ಸಂಬAಧಿಸಿದAತೆ ಪ್ರತಿಕ್ರಿಯಿಸಿದ ಹರಿಪ್ರಸಾದ್ ರಾಜ್ಯದ ಶಾಸಕರನ್ನು ಕಾಂಗ್ರೆಸ್ ಪಕ್ಷದಲ್ಲಿ ಇರುವಂತಹ ಸಮುದಾಯದ ಸಮಸ್ಯೆಗಳನ್ನ ವಿಚಾರಗಳನ್ನು ಚರ್ಚೆ ಮಾಡುವುದಕ್ಕೆ ಆಥವಾ ಸಮುದಾಯದ ವಿಚಾರಗಳನ್ನು ಚರ್ಚೆ ಮಾಡಲು ಸೇರುವುದರಲ್ಲಿ ಯಾವುದೇ ತಪ್ಪು ಇಲ್ಲ. ಮುಖ್ಯಮಂತ್ರಿ ಮಾಡುವುದು ಮಂತ್ರಿ ಮಾಡುವುದು ಅದೆಲ್ಲ ಹೈಕಮಾಂಡ್‌ಗೆ ಸೇರಿರುವುದು. ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದರೆ ವೈಯಕ್ತಿಕವಾಗಿ ಚರ್ಚೆ ಮಾಡುವುದಕ್ಕೆ ಒಂದು ವೇದಿಕೆ ಸೃಷ್ಟಿ ಮಾಡುವುದರಲ್ಲಿ ಯಾವುದೇ ತಪ್ಪು ಇಲ್ಲ. ಪರಮೇಶ್ವರ್ ಹಿರಿಯ ನಾಯಕರು ಇದ್ದಾರೆ. ಯಾರು ತಪ್ಪು ಅರ್ಥ ಮಾಡಿಕೊಳ್ಳುವ ಹಾಗೆ ಇಲ್ಲ ಎಂದರು.