ಎಸ್.ಆರ್.ಹರೀಶ್ ಆಚಾರ್ಯ ನಾಮ ಪತ್ರ ಸಲ್ಲಿಕೆ

mng-15may-harish acharya
Published on




ಮಂಗಳೂರು : ನೈಋತ್ಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಮಂಗಳೂರಿನ ಡಾ.ಎಸ್. ಆರ್. ಹರೀಶ್ ಆಚಾರ್ಯ ಅವರು
ಬುಧವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಕಾಲೇಜು ಅತಿಥಿ ಉಪನ್ಯಾಸಕರ ಸಂಘದ
ರಾಜ್ಯಾಧ್ಯಕ್ಷ ಡಾ. ಹನುಮಂತಪ್ಪ ಕಲ್ಮನಿ, ಜಿಲ್ಲಾಧ್ಯಕ್ಷ ಮನಮೋಹನ್ ಬಳ್ಳಡ್ಕ, ಶಿಕ್ಷಕರ ಸಂಘಟನೆಯ ಪ್ರಮುಖರಾದ ರಂಜಿತ್. ಪಿ.ಜೆ., ಡಾ.ಅರುಣ್ ಕುಮಾರ್ ಮತ್ತು ನಿತೇಶ್ ಸಾಲಿಯಾನ್ ಉಪಸ್ಥಿತರಿದ್ದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಡಾ.ಎಸ್. ಆರ್. ಹರೀಶ್ ಆಚಾರ್ಯ ಅವರು ‘ ರಾಜಕೀಯ ಪಕ್ಷಗಳು ಕರಾವಳಿ ಜಿಲ್ಲೆಗಳ ಶಿಕ್ಷಕರ ಹಾಗೂ ಪದವೀಧರರ ಅಸ್ತಿತ್ವವನ್ನೇ ನಿರಾಕರಿಸಿದಂತಾಗಿದೆ. ಆದುದರಿಂದ ಶಿಕ್ಷಕರ ಮತ್ತು ಪದವೀಧರರ ಸ್ವಾಭಿಮಾನದ ಸಂಕೇತವಾಗಿ ಈ ಬಾರಿಯ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net