ಪಕ್ಷೇತರ ಅಭ್ಯರ್ಥಿಯಾಗಿ ಹರೀಶ್ ಜಿ.ಆಚಾರ್ಯ ಕಣಕ್ಕೆ

Z Harish Acharya 2
Published on

ಮಡಿಕೇರಿ: ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ವೀರನಾಡು ರಕ್ಷಣಾ ವೇದಿಕೆಯ ಅಧ್ಯಕ್ಷರಾಗಿರುವ ಶ್ರೀಕೃಷ್ಣ ಗೋಶಾಲೆಯ ಸಂಸ್ಥಾಪಕ ಅಧ್ಯಕ್ಷ ಹರೀಶ್ ಜಿ.ಆಚಾರ್ಯರವರು ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.


ಏ.೧೩ ರಂದು ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿರುವ ಅವರು, ಕೊಡಗಿನ ಜನ ಬದಲಾವಣೆಯನ್ನು ಬಯಸುತ್ತಿದ್ದು, ನಮ್ಮಂತಹ ಸಾಮಾನ್ಯ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಕಾಲ ಪಕ್ವವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.


೨೦೧೮ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಸಿಲುಕಿ ಅನಾಥವಾಗಿ ಅಲೆದಾಡುತ್ತಿದ್ದ ಗೋವುಗಳಿಗೆ ಆಶ್ರಯ ನೀಡುವ ಸಲುವಾಗಿ ಶ್ರೀಕೃಷ್ಣ ಗೋಶಾಲೆಯನ್ನು ಸ್ಥಾಪಿಸಿದ್ದೇನೆ. ಆ ಮೂಲಕ ನೈಜ ಗೋಪ್ರೀತಿಯನ್ನು ತೋರಿಸಿದ್ದೇನೆ ಮತ್ತು ಗೋರಕ್ಷಣೆಗೆ ಆದ್ಯತೆ ನೀಡಿದ್ದೇನೆ. ಸಿನಿಮಾ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದು, ನನ್ನ ಬಹುತೇಕ ಸಮಯವನ್ನು ಸಮಾಜ ಸೇವೆಗಾಗಿ ಮೀಸಲಿಟ್ಟಿದ್ದೇನೆ. ಜನ ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹರೀಶ್ ಜಿ.ಆಚಾರ್ಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net