ಹ್ಯೂಮನ್ ರೈಟ್ಸ್ ರಾಜ್ಯಾಧ್ಯಕ್ಷರಾಗಿ ಹರೀಶ್ ಜಿ.ಆಚಾರ್ಯ ಆಯ್ಕೆ

HARISH G.ACHARYA
Published on

ಮಡಿಕೇರಿ: ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಹರೀಶ್ ಜಿ.ಆಚಾರ್ಯರನ್ನು ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ನರೇಂದ್ರ ಅರೋರಾರವರು ಆಯ್ಕೆ ಮಾಡಿದ್ದಾರೆ.


ಈ ಕುರಿತು ಪತ್ರಿಕಾ ಪ್ರಕಟಣೆಯ ನೀಡಿರುವ ಹರೀಶ್ ಜಿ.ಆಚಾರ್ಯ, ಮಾನವ ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಲಂಚ ಮುಕ್ತ ಸಮಾಜ ನಿರ್ಮಿಸಲು ಸಂಘಟನೆ ಕಟಿಬದ್ಧವಾಗಿದೆ. ಈ ಹಿನ್ನೆಲೆ ತನ್ನನ್ನು ರಾಜ್ಯಾಧ್ಯಕ್ಷನಾಗಿ ತನ್ನನ್ನು ಆಯ್ಕೆ ಮಾಡಿದೆ. ಅಲ್ಲದೇ, ರಾಷ್ಟ್ರೀಯ ಮಟ್ಟದಲ್ಲಿ ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು, ದೇಶಸೇವೆ ಮಾಡಿದ ಹಿರಿಯ ಅಧಿಕಾರಿಗಳು ಸಂಘಟನೆಯಲ್ಲಿದ್ದಾರೆ. ಕಾನೂನು ಬದ್ಧವಾಗಿ ಸಾರ್ವಜನಿಕರಿಗೆ ನ್ಯಾಯ ಒದಗಿಸಲು ಶ್ರಮ ಪಡುತ್ತಿದ್ದಾರೆ ಎಂದು ಹರೀಶ್ ಜಿ.ಆಚಾರ್ಯ ತಿಳಿಸಿದ್ದಾರೆ.


ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ಹೆಚ್ಚಾಗುತ್ತಿದೆ. ಸರ್ಕಾರಗಳು ಕೂಡ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಎಡವುತ್ತಿವೆ. ಸಕಾಲದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಆದ್ದರಿಂದ ಕರ್ನಾಟಕ ರಾಜ್ಯದಲ್ಲೂ ಮಾನವ ಹಕ್ಕುಗಳ ಕುರಿತು ಜನಜಾಗೃತಿ ಮೂಡಿಸುವ ಮೂಲಕ ನ್ಯಾಯದ ಪರ ಹೋರಾಟ ನಡೆಸಲು ಸಂಘಟನೆ ಸಜ್ಜಾಗಿದೆ. ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳು, ಯೋಧರು, ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಂಘಟನೆಯನ್ನು ಬಲಗೊಳಿಸಲಾಗುವುದು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net