ಅಧ್ಯಕ್ಷರಾಗಿ ಹರೀಶ್ ಆಯ್ಕೆ

ಅಧ್ಯಕ್ಷರಾಗಿ ಹರೀಶ್ ಆಯ್ಕೆ
Published on

ಸೋಮವಾರಪೇಟೆ: ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ಅಧ್ಯಕ್ಷರಾಗಿ ಎಚ್.ಆರ್.ಹರೀಶ್, ಪ್ರಧಾನ ಕಾರ್ಯದರ್ಶಿಯಾಗಿ ಡಿ.ಪಿ. ಲೋಕೇಶ್ ಆಯ್ಕೆಯಾದರು.

ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳಿಧರ್ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ ನೂತನ ಆಡಳಿತ ಮಂಡಳಿ ರಚಿಸಲಾಯಿತು. ಉಪಾಧ್ಯಕ್ಷರಾಗಿ ತೇಲಪಂಡ ಕವನ್ ಕಾರ್ಯಪ್ಪ, ಖಜಾಂಚಿಯಾಗಿ ದುಷ್ಯಂತ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಶನಿವಾರಸಂತೆ ಹೋಮೇಶ್ ಮಣಗಲಿ ಆಯ್ಕೆಯಾದರು. ನಿರ್ದೇಶಕರಾಗಿ ಜಯಪ್ಪ ಹಾನಗಲ್, ಟೋಮಿ ಥಾಮಸ್, ಎಸ್.ಆರ್. ವಸಂತ್, ಸುಕುಮಾರ್ ಆಯ್ಕೆಯಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net