ಕೌಟುಂಬಿಕ ಕಲಹದಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ

Crime Logo
Published on

ಹಾನಗಲ್ಲ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ಶ್ರೀಕಾಂತ ಭೂತಪ್ಪ ಹರಿಜನ (35) ಮೃತ ವ್ಯಕ್ತಿ.
ಈತನ ಮೊದಲನೇ ಪತ್ನಿ ಕೌಟುಂಬಿಕ ಕಲಹದಿಂದ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿತ್ತು. ಇದರಿಂದ ಬೇಸತ್ತ ಶ್ರೀಕಾಂತ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ. ಕೂಡಲೇ ಆತನಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net