

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 6ನೇ ದಿನವಾದ ಶುಕ್ರವಾರ ಉಪ್ಪುಂದ ರಾಜೇಶ್ ಪಡಿಯಾರ್, ಮೈಸೂರು ಹಾಗೂ ರಾಮಕೃಷ್ಣ ಕಾಟುಕುಕ್ಕೆ ಹಾಡುಗಳನ್ನು ಕಲಿಸಿಕೊಟ್ಟರು.
ಕಮ್ಮಟಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ.ಹೆಗ್ಗಡೆ, ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಭೇಟಿ ನೀಡಿ ಶಿಬಿರಾರ್ಥಿಗಳನ್ನು ಪ್ರೇರೇಪಿಸಿದರು.
ನಿವೃತ್ತ ಮುಖ್ಯಶಿಕ್ಷಕ ಮುನಿರಾಜ ರೆಂಜಾಳ ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡುತ್ತಾ, ಸಾಮರಸ್ಯವೇ ಬದುಕಿನ ಮೂಲ ಗುರಿಯಾಗಿದ್ದು, ಭಜನೆಗೆ ಜಾತಿ, ಮತ, ಪಂಥಗಳು ಅಡ್ಡಿಯಾಗುವುದಿಲ್ಲ. ಹಾಗಾಗಿ ಭಜನೆಯ ಮೂಲವೇ ಸಾಮರಸ್ಯ ಮೂಡಿಸುವುದು ಎಂದರು.
ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜು ಉಜಿರೆ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಯೋಗ ತರಬೇತಿಯನ್ನು ಡಾ.ಐ.ಶಶಿಕಾಂತ್ ಜೈನ್ ನಡೆಸಿಕೊಟ್ಟರು. ಸೌಮ್ಯ ಸುಭಾಷ್ ಧರ್ಮಸ್ಥಳ ಸಾಂಪ್ರದಾಯಿಕ ಹಾಡುಗಳನ್ನು ಕಲಿಸಿಕೊಟ್ಟರು. ಭಜನಾ ತರಬೇತಿ ಕಮ್ಮಟದ ಶಿಬಿರಾರ್ಥಿಗಳಿಂದ 3ನೇ ದಿನದ ನಗರ ಸಂಕೀರ್ತನೆ ಕಾರ್ಯಕ್ರಮ ನಡೆಯಿತು. ಭಜನಾ ಕಮ್ಮಟದ ರಾಜ್ಯ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿಗಳಾದ ವೀರು ಶೆಟ್ಟಿ, ಕೋಶಾಧಿಕಾರಿ ಧನ್ಯಕುಮಾರ್, ಸದಸ್ಯರಾದ ಶ್ರೀನಿವಾಸರಾವ್, ರತ್ನವರ್ಮ ಜೈನ್ ಕಾರ್ಯಕ್ರಮ ಸಂಘಟಿಸಿದರು.
ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಸದಸ್ಯರಾದ ಪದ್ಮರಾಜ್ ಜೈನ್, ಪೂರ್ಣಿಮಾ ಜೋಶಿ ನಿರೂಪಿಸಿದರು. ಮಹಾವೀರ ಅಜ್ರಿ, ಭವಾನಿ, ಮೋಹನ್ ಶೆಟ್ಟಿ, ಸತೀಶ್ ಪೈ ಸಹಕರಿಸಿದರು. ಕುಣಿತ ಭಜನೆ ತರಬೇತಿಯನ್ನು ಸಂದೇಶ, ವಿನ್ಯಾಸ್, ನಾಗೇಶ್ ಹಾಗೂ ಚೈತ್ರ ನಡೆಸಿಕೊಟ್ಟರು. ಸಮನ್ವಯಾಧಿಕಾರಿಗಳಾಗಿ ರಾಘವೇಂದ್ರ, ಸಂತೋಷ್ ಪಿ.ಕರ್ತವ್ಯ ನಿರ್ವಹಿಸಿದರು.
ದೇವರ ಮೇಲೆ ಶ್ರದ್ಧೆ ಇದ್ದಾಗ ಅಹಂಕಾರ ಇರಲು ಸಾಧ್ಯವಿಲ್ಲ. ಹಾಗಾಗಿ ಭಜನೆಯ ಮೂಲಕ ಭಗವಂತನ ಗೆಲ್ಲಲು ಸಾಧ್ಯ. ದೇಶಭಕ್ತಿ ಇದ್ದವರಲ್ಲಿ ದೈವ ಭಕ್ತಿಯೂ ಇರುತ್ತದೆ, ಮನುಷ್ಯನು ಎರಡನ್ನೂ ಅಳವಡಿಸಿಕೊಳ್ಳಬೇಕು. ಆಗ ಸಾಮರಸ್ಯ ಮೂಡುತ್ತದೆ. ಮುನಿರಾಜ ರೆಂಜಾಳ, ನಿವೃತ್ತ ಮುಖ್ಯಶಿಕ್ಷಕ
ಮುನಿರಾಜ ರೆಂಜಾಳ, ನಿವೃತ್ತ ಮುಖ್ಯಶಿಕ್ಷಕ